ಬೆಳಗಾವಿ: ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿಹಾಕಿದ ಗ್ರಾಮಸ್ಥರು ಹಲ್ಲೆ ನಡೆಸಿ ಮೃತಪಟ್ಟ ಘಟನೆ ಬಸವನಕುಡಚಿ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದ ಗಾಂಧಿ ಗಲ್ಲಿಯ ನಿವಾಸಿ ವಿಶಾಲ್ ಕಲ್ಲಪ್ಪಾ ಪಟಾಯಿ (28) ಸಾವನ್ನಪ್ಪಿದ್ದಾನೆ. ಕಳೆದ ನಾಲ್ಕು ದಿನಗಳ ಹಿಂದೆ ಮಾನಸಿಕ ಅಸ್ವಸ್ಥನಂತೆ ಗ್ರಾಮಗಳಲ್ಲಿ ಓಡಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ. ಇದಲ್ಲದೇ 4 ದಿನಗಳ ಹಿಂದೆ ಸುಮಾರು 9 ಶಿಕ್ಷಕರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದ. ಈ ವೇಳೆ ಗಾಯಗೊಂಡಿದ್ದ ಶಿಕ್ಷಕರಿಗೂ ಚಿಕಿತ್ಸೆ ಕೊಡಿಸಲಾಗಿದೆ. ಇದನ್ನೂ ಓದಿ: ನಾಟಿ ಮಾಡಿದ್ದ ಭತ್ತದ ಗದ್ದೆಯಲ್ಲಿ ಓಡಾಡಿ ಕಾಡಾನೆಗಳ ದಾಂಧಲೆ – ಬೆಳೆ ನಾಶ, ಕಂಗಾಲಾದ ರೈತರು
ಇದೇ ದಿನ ಸಾಯಂಕಾಲ ಗ್ರಾಮದ ಕೆಲ ಜನ ಸೇರಿಕೊಂಡು ಮಾನಸಿಕ ಅಸ್ವಸ್ಥನನ್ನು ಮರಕ್ಕೆ ಕಟ್ಟಿಹಾಕಿ ಮನಬಂದಂತೆ ಥಳಿಸಿದ್ದಾರೆ. ಈ ಹಿನ್ನೆಲೆಯಲ್ಲಿಗಂಭೀರ ಗಾಯಗೊಂಡ ವಿಶಾಲ್‍ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗಣೇಶೋತ್ಸವ ಫ್ಲೆಕ್ಸ್‌ನಲ್ಲಿದ್ದ ಸಾವರ್ಕರ್ ಫೋಟೋ ಹರಿದುಹಾಕಿದ ಕಿಡಿಗೇಡಿಗಳು