ಬೆಂಗ್ಳೂರಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ!

Public TV
1 Min Read
BJP 2

ಬೆಂಗಳೂರು: ನಗರದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಜಯನಗರದ ಶಾಕಂಬರಿ ನಗರ ವಾರ್ಡ್ ಕಾರ್ಯಕರ್ತ ಧೀರಜ್ ಮೇಲೆ ಮೂರ್ನಾಲ್ಕು ಜನ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಜಯನಗರ ಚುನಾವಣೆ ವೈಷಮ್ಯ ಹಿನ್ನೆಲೆಯಲ್ಲಿ ಹಲ್ಲೆ ನಡೆದಿರುವ ಸಾಧ್ಯತೆಯಿದ್ದು, ಗಾಯಾಳು ಧೀರಜ್ ಅವರನ್ನು ಸಾರಕ್ಕಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

vlcsnap 2018 06 13 08h35m44s68

ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಅಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ದಕ್ಷಿಣ ವಲಯ ಡಿಸಿಪಿ ಶರಣಪ್ಪ ಭೇಟಿ ನೀಡಿ ಪ್ರತಿಭಟನಾರರನ್ನು ಸಮಧಾನಪಡಿಸಿದ್ರು. ಪ್ರಕರಣ ಸಂಬಂಧ ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವೈಯಕ್ತಿಕ ಕಾರಣ ಶಂಕೆ ವ್ಯಕ್ತಪಡಿಸಿದ್ದಾರೆ.

ಜಯನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *