ಶಿವಮೊಗ್ಗ: ಬಿಜೆಪಿ (BJP) ರಾಜ್ಯಾಧ್ಯಕ್ಷರ ತವರು ಜಿಲ್ಲೆಯಲ್ಲೇ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ಕಾರ್ಯಕರ್ತನನ್ನು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಗೋಕುಲ್ ಕೃಷ್ಣನ್ ಎಂದು ಗುರುತಿಸಲಾಗಿದೆ. ಬಿಜೆಪಿ ಕಾರ್ಯಕರ್ತ ಗೋಕುಲ್ ಕೃಷ್ಣನ್ ಭದ್ರಾವತಿಯಲ್ಲಿ ನಡೆಯುತ್ತಿರುವ ಇಸ್ಪೀಟು, ಓಸಿ ದಂಧೆ ಸೇರಿದಂತೆ ಅಕ್ರಮ ದಂಧೆ ಕುರಿತು, ಅಲ್ಲದೇ ಈ ದಂಧೆಯಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ ಕೈವಾಡ ಇದೆ ಎಂಬುದಾಗಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು. ಇದರಿಂದ ರೊಚ್ಚಿಗೆದ್ದ ದುಷ್ಕರ್ಮಿಗಳು ಮನೆಯ ಮುಂದೆ ನಿಲ್ಲಿಸಿದ್ದ ಗೋಕುಲ್ ಕೃಷ್ಣನ್ ಕಾರನ್ನು ಜಖಂಗೊಳಿಸಿದ್ದರು.
Advertisement
Advertisement
ಈ ಬಗ್ಗೆ ಭದ್ರಾವತಿ ನ್ಯೂಟೌನ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇದೀಗ ಗೋಕುಲ್ ಕೃಷ್ಣನ್ ಮೇಲೆ ಹಲ್ಲೆ ನಡೆಸಿದ್ದಾರೆ. ಭದ್ರಾವತಿಯ ಬಿ.ಹೆಚ್.ರಸ್ತೆಯಲ್ಲಿರುವ ಕಾಂಚನ ಹೋಟೆಲ್ ಗೆ ಊಟ ಪಾರ್ಸಲ್ ತರಲು ಗೋಕುಲ್ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದ ಆರೇಳು ಮಂದಿ ದುಷ್ಕರ್ಮಿಗಳು ಏಕಾಏಕಿ ಗೋಕುಲ್ ಮೇಲೆ ನೀರಿನ ಜಗ್ಗ್ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: 64 ವರ್ಷದ ಮಾಜಿ ಯೋಧನಿಗೆ ಮದುವೆ ಮಾಡಿಸೋದಾಗಿ 10 ಲಕ್ಷ ವಂಚನೆ- ಮೂವರ ಬಂಧನ
Advertisement
Advertisement
ಹಲ್ಲೆಯಿಂದಾಗಿ ಗೋಕುಲ್ ಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗೆ ಭದ್ರಾವತಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯನ್ನು ಖಂಡಿಸಿರುವ ಬಿಜೆಪಿ ಮುಖಂಡರು ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಕುರಿತು ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ದೂರು ದಾಖಲಾಗಿದೆ.