ಉಡುಪಿ: ಮಗುವಿನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಾಯಿ ಮತ್ತು ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಆರೋಪಿ ತಾಯಿ ಪೂರ್ಣಪ್ರಿಯಾ ಮತ್ತು ಆಕೆಯ ಪ್ರಿಯಕರ ಸುಹೇಲ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೆ.13ರಂದು ಅನಾರೋಗ್ಯದ ಕಾರಣ ನೀಡಿ ಮಗುವನ್ನು ಉಡುಪಿ ಸರ್ಕಾರಿ ಆಸ್ಪತ್ರೆಗೆ ತಾಯಿ ದಾಖಲಿಸಿದ್ದಳು. ಗಾಯಗಳ ಬಗ್ಗೆ ತಾಯಿ ಪೂರ್ಣಪ್ರಿಯಾ ಯಾವುದೇ ಮಾಹಿತಿ ನೀಡಿರಲಿಲ್ಲ. ಜಿಲ್ಲಾ ಆರೋಗ್ಯಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ಕಳುಹಿಸಿದ್ದರು. ಅಧಿಕಾರಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡ ಮಗುವಿನ ವಿಚಾರಣೆ ನಡೆಸಿದರು. ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ ವಿಚಾರಣೆಗೊಳಿಸಲಾಯಿತು.
Advertisement
ಆ ಬಳಿಕ ಅಮಾಸೆಬೈಲು ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಗು ಜಾರಿ ಬಿದ್ದು ಗಾಯಗೊಂಡಿದೆ ಎಂದು ತಾಯಿ ಹೇಳಿಕೆ ನೀಡಿದ್ದಳು. ತೀವ್ರ ವಿಚಾರಣೆ ನಡೆಸಿ ಹಲ್ಲೆ ಪ್ರಕರಣ ಬಯಲಿಗೆಳೆದ ಅಧಿಕಾರಿಗಳು, ಮಗು ಮಂಚದಲ್ಲಿ ಮಲಗಬಾರದು ಎಂಬ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿರುವುದು ಬೆಳಕಿಗೆ ಬಂದಿದೆ.
Advertisement
ಕೆಲ ಸಮಯದ ಹಿಂದೆ ಮಗುವಿನ ತಂದೆ ನಿಧನರಾಗಿದ್ದರು. ಆ ಬಳಿಕ ಗೆಳೆಯ ಸುಹೇಲ್‌ನೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಪೂರ್ಣಪ್ರಿಯಾ ಹಾಗೂ ಆಕೆಯ ಪ್ರಿಯಕರ ಸುಹೇಲ್ ಮಗುವಿನ ಮೈಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದರು. ಅ.24ರಂದು ಜಾಮೀನಿಗೆ ಅರ್ಜಿ ಸಲ್ಲಿಸಿ ನ್ಯಾಯಾಲಯಕ್ಕೆ ಆರೋಪಿಗಳು ಶರಣಾಗಿದ್ದರು. ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದ ಗಂಭೀರತೆಯನ್ನು ಮನಗಂಡು ಇದೀಗ ಜಾಮೀನು ರದ್ದು ಮಾಡಲಾಗಿದೆ.
Advertisement
ಅ.29 ರಂದು ವಿಚಾರಣೆ ನಡೆದು ನ್ಯಾಯಾಲಯ ಜಾಮೀನು ರದ್ದು ಮಾಡಿದೆ. ಎರಡನೇ ಹೆಚ್ಚುವರಿ ಸಿವಿಲ್ ಕೋರ್ಟ್ ಜೆಎಂಎಫ್‌ಸಿಯಲ್ಲಿ ಇಬ್ಬರ ಮಧ್ಯಂತರ ಜಾಮೀನು ಅರ್ಜಿ ವಜಾಗೊಂಡಿದೆ.