ತುಮಕೂರು: ತೆಂಗಿನ ಕಾಯಿ ಕದ್ದ ಕಳ್ಳನನ್ನು ಕಂಬಕ್ಕೆ ಕಟ್ಟಿ ಹಾಕಿ ದೊಣ್ಣೆಯಿಂದ ಹಲ್ಲೆ ಮಾಡಿದ ಘಟನೆ ತುರುವೇಕೆರೆ ತಾಲೂಕಿನ ತಾವರಕೆರೆ ಗ್ರಾಮದಲ್ಲಿ ನಡೆದಿದೆ.
ಹರೀಶ್ ತೆಂಗಿನಕಾಯಿ ಕದ್ದ ಕಳ್ಳ. ಈತ ರಾಜು ಎಂಬವರ ತೋಟದ ತೆಂಗಿನ ಕಾಯಿಯನ್ನು ಕಳ್ಳತನ ಮಾಡುವ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಬಳಿಕ ರಾಜು ಕಳ್ಳನನ್ನು ತೋಟದಲ್ಲಿದ್ದ ಕಂಬಕ್ಕೆ ಕಟ್ಟಿ ಹಾಕಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಆರ್‌ಬಿಐ ಪರಿಶೀಲನೆ ವೇಳೆ ನಕಲಿ ನೋಟುಗಳು ಪತ್ತೆ
ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.