ಶಿವಮೊಗ್ಗ: ಗ್ರಾಮ ಪಂಚಾಯ್ತಿ (Gram Panchayat) ಸದಸ್ಯನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ಹೊಸನಗರ (Hosanagar) ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಎಂಬವರ ಮೇಲೆ ಹಲ್ಲೆ ನಡೆದಿದೆ. ಹಳೆಯ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯ ಸಹಿಸದೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ದೇವರಾಜ್ ಎಂಬಾತ ವಿಶ್ವನಾಥ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ವಿಶ್ವನಾಥ್ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಗೋಡಿ ವಿಶ್ವನಾಥ್ ಕಾಂಗ್ರೆಸ್ ಬೆಂಬಲಿತನಾಗಿದ್ದು, ಹಲ್ಲೆ ನಡೆಸಿದ ದೇವರಾಜ್ ಬಿಜೆಪಿ ಬೆಂಬಲಿತನಾಗಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.