ವಿಜಯಪುರ: ಮನೆ ಮನೆಗೆ ಶ್ರೀರಾಮಮಂದಿರ (Ram Mandir) ಮಂತ್ರಾಕ್ಷತೆ ಹಂಚುವ ವೇಳೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಮನೆ ಮನೆಗೆ ಮಂತ್ರಾಕ್ಷತೆ ಹಂಚಿಕೆ ಕಾರ್ಯ ವಿಜಯಪುರದಲ್ಲಿ ನಡೆದಿತ್ತು.
ವಿಜಯಪುರ (Vijayapura) ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ಮಂತ್ರಾಕ್ಷತೆ (Mantrakshate) ಹಂಚುವ ವೇಳೆ ಹಿಂದೂ ಸಮಾಜದ ಯುವಕರ ಮೇಲೆ ಹಲ್ಲೆ ನಡೆದ ಆರೋಪ ಕೇಳಿಬಂದಿದೆ. ಮಂತ್ರಾಕ್ಷತೆ ಹಂಚುತ್ತಿದ್ದ ಹಿಂದೂಗಳ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಪಟ್ಟಣದ ವಾರ್ಡ್ ನಂಬರ್ 8 ರಲ್ಲಿ ಘಟನೆ ನಡೆದಿದೆ. ಈ ವಾರ್ಡ್‌ನಲ್ಲಿ ಮುಸ್ಲಿಮರು ಅಧಿಕವಾಗಿದ್ದಾರೆ. ಈ ಏರಿಯಾದಲ್ಲಿ ಘೋಷಣೆ ಕೂಗದಂತೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದನ್ನೂ ಓದಿ: ರಾಮಲಲ್ಲಾ ವಿಗ್ರಹ ಕೆತ್ತನೆಗೆ ಬಳಸಿರುವ ಕಪ್ಪು ಶಿಲೆ ಸಿಕ್ಕ ಜಾಗದಲ್ಲೇ ರಾಮಮಂದಿರ – ಜ.22 ಕ್ಕೆ ಭೂಮಿಪೂಜೆ
Advertisement
Advertisement
ಕಾರಣ ಆರ್‌ಎಸ್‌ಎಸ್, ವಿಹೆಚ್‌ಪಿ, ಹಿಂದೂ ಜಾಗರಣ ವೇದಿಕೆ, ಭಜರಂಗ ದಳ ಸೇರಿದಂತೆ ಇತರೆ ಹಿಂದೂ ಸಂಘಟನೆಗಳು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೇ ಘಟನೆ ಖಂಡಿಸಿ ಇಂದು ದೇವರಹಿಪ್ಪರಗಿ ಆಗಮಿಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ದೇವರಹಿಪ್ಪರಗಿ ಪಟ್ಟಣದಲ್ಲಿ ಜಾಥಾ ಮಾಡಿದ್ದಾರೆ.
Advertisement
ಶ್ರೀರಾಮ ಮಂತ್ರಾಕ್ಷತೆ, ಶ್ರೀರಾಮ ಮಂತ್ರ ಜಪ ಮಾಡುತ್ತಾ ಜಾಥಾದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು. ಈ ಮೂಲಕ ಹಿಂದೂ ಸಮಾಜದ ಯುವಕರಲ್ಲಿ ಧೈರ್ಯ ತುಂಬಲು ಹಿಂದೂಪರ ಸಂಘಟನೆಗಳು ಮುಂದಾದವು. ಹಿಂದೂ ಯುವಕರ ಮೇಲಿನ ಹಲ್ಲೆ ಕುರಿತು ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಕೂಡ ನಡೆದಿದೆ. ಇದನ್ನೂ ಓದಿ: ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ
Advertisement
ಹಿಂದೂ-ಮುಸ್ಲಿಂ ಸಮಾಜದ ಮುಖಂಡರನ್ನು ಕರೆದು ಪೊಲೀಸರು ಸಭೆ ನಡೆಸಿದ್ದಾರೆ. ಯಾವುದೇ ಶಾಂತಿ ಸುವ್ಯವಸ್ಥೆ ಧಕ್ಕೆಗೆ ಅವಕಾಶ ನೀಡಲ್ಲ ಎಂದು ಉಭಯ ಸಮಾಜದ ಮುಖಂಡರು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಗಲಾಟೆಯಾಗಿರುವ ವಾರ್ಡ್ ನಂಬರ್ 8 ರಲ್ಲಿ ಹಿಂದೂ ಕಾರ್ಯಕರ್ತರು ಮಂತ್ರಾಕ್ಷತೆ ವಿತರಣೆ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.