ತಿರುವನಂತಪುರಂ: ಬೀಚ್‍ನಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದ ವೇಳೆ ನಡೆದ ಘರ್ಷಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಓರ್ವನನ್ನು ಬಂಧಿಸಿ 50 ಜನರ ಮೇಲೆ ಪ್ರಕರಣ ದಾಖಲಾಗಿದೆ.
ಸಂಗೀತ ಕಾರ್ಯಕ್ರಮದ ವೇಳೆ ಸ್ಥಳದಲ್ಲಿ ನಿಲ್ಲಲಾಗದವರು ಗಲಾಟೆ ಮಾಡಿದ್ದು, ಜನದಟ್ಟಣೆಯಿಂದ ಬ್ಯಾರಿಕೇಡ್‍ಗಳಿಗೂ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ಕಾರ್ಯಕ್ರಮವನ್ನು ನಿಲ್ಲಿಸಲು ಒತ್ತಾಯಿಸಿದ್ದಾರೆ. ಆದರೆ ಅಲ್ಲಿ ನೆರೆದಿದ್ದ ಗುಪೊಂದು ಕಲ್ಲು ಹಾಗೂ ಬಿಯರ್ ಬಾಟಲಿಗಳನ್ನು ಪೊಲೀಸರ ಮೇಲೆ ತೂರಿ ಹಲ್ಲೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ಕರೆಸಿ ಪರಿಸ್ಥಿತಿ ನಿಯಂತ್ರಿಸಲಾಯಿತು.
ಘಟನೆಯಲ್ಲಿ 6 ಪೊಲೀಸರು ಹಾಗೂ 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಈ ಕುರಿತು ವೆಲ್ಲಾಯಿಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 50 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಹಿಜಬ್‍ಗೆ ಅವಕಾಶ ಇಲ್ಲದ ಕಾಲೇಜಿನಿಂದ ಟಿಸಿ ಪಡೆದ ವಿದ್ಯಾರ್ಥಿನಿಯರು
ಸರಿಯಾದ ಸೌಲಭ್ಯಗಳಿಲ್ಲದೆ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರು ಹಾಗೂ ಜೆಡಿಟಿ ಕಾಲೇಜಿನವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ, ಶಕ್ತಿ ಪ್ರದರ್ಶನ ಸರಿಯಲ್ಲ: ವಿಶ್ವನಾಥ್