ಆನೇಕಲ್: ಆರೋಪಿಯ ಕಾಲಿಗೆ ಪೊಲೀಸರು (Police) ಗುಂಡೇಟು ನೀಡಿ ಬಂಧಿಸಿದ ಘಟನೆ ಮಾಯಸಂದ್ರದ ಬಳಿ ನಡೆದಿದೆ.
ಬೆಸ್ತಮಾನಹಳ್ಳಿ ಲೋಕೇಶ್ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಈತ ರೌಡಿಶೀಟರ್ ಮನೋಜ್ ಎಂಬಾತನ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ. ಆರೋಪಿ ಊರಿಗೆ ಬರುತ್ತಿರುವ ಮಾಹಿತಿ ಮೇರೆಗೆ ಬಂಧಿಸಲು ಜಿಗಣಿ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರ ತಂಡ ತೆರಳಿತ್ತು.
Advertisement
Advertisement
ಲೊಕೇಶ್ ಮಾಯಸಂದ್ರದ ಬಳಿ ನಿರ್ಮಾಣ ಆಗುತ್ತಿರುವ ರಸ್ತೆಯಲ್ಲಿ ಬರುತ್ತಿದ್ದ. ಈ ವೇಳೆ ಆತನಿಗೆ ಪೊಲೀಸರು ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಆರೋಪಿ ಪೊಲೀಸರ ಮಾತನ್ನು ಲೆಕ್ಕಿಸದೆ ಪೊಲೀಸ್ ಸಿಬ್ಬಂದಿ ಚೆನ್ನಬಸವ ಎಂಬವರ ಮೇಲೆ ದಾಳಿ ಮಾಡಿದ್ದಾನೆ. ಈ ವೇಳೆ ಇನ್ಸ್‌ಪೆಕ್ಟರ್ ಮಂಜುನಾಥ್ ಲೋಕೇಶ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
Advertisement
Advertisement
ಆರೊಪಿಯನ್ನು ಹಾಗೂ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.