ಶಿವಮೊಗ್ಗ: ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ನಕಲು ಮಾಡುತ್ತಿದ್ದ ಎಂಬ ಕಾರಣಕ್ಕೆ ಉಪನ್ಯಾಸಕರೊಬ್ಬರು ವಿದ್ಯಾರ್ಥಿಯ ಕೈ ಕಚ್ಚಿದ ಘಟನೆ ಜಿಲ್ಲೆಯ ಹೊಸನಗರದಲ್ಲಿ ಮಂಗಳವಾರ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಅಂತಿಮ ಬಿ.ಎ ಪದವಿ ವಿದ್ಯಾರ್ಥಿ ಕಿರ್ತೇಶ್ ಎಂಬಾತ ಮೊಬೈಲ್ ಮೂಲಕ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ. ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಕಾಲೇಜಿನ ಉಪನ್ಯಾಸಕ ಅಂಜನ್ ಕುಮಾರ್ ವಿದ್ಯಾರ್ಥಿ ನಕಲು ಮಾಡುತ್ತಿರುವ ಬಗ್ಗೆ ಪ್ರಶ್ನಿಸಿದ್ದಾರೆ. ಅಲ್ಲದೇ ನಕಲು ಮಾಡಲು ಬಳಸಿದ್ದ ಮೊಬೈಲ್ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ
Advertisement
Advertisement
ಈ ವೇಳೆ ವಿದ್ಯಾರ್ಥಿ ಹಾಗೂ ಉಪನ್ಯಾಸಕರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ವಿದ್ಯಾರ್ಥಿ, ಉಪನ್ಯಾಸಕರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಉಪನ್ಯಾಸಕ, ವಿದ್ಯಾರ್ಥಿಯ ಕೈ ಕಚ್ಚಿದ್ದಾರೆ.
Advertisement
ಘಟನೆ ನಂತರ ವಿದ್ಯಾರ್ಥಿ ಉಪನ್ಯಾಸಕರ ವಿರುದ್ದ ಹೊಸನಗರ ಠಾಣೆಗೆ ದೂರು ನೀಡಿದ್ದಾನೆ. ಇದಕ್ಕೆ ಪ್ರತಿಯಾಗಿ ಉಪನ್ಯಾಸಕ ಕೂಡ ವಿದ್ಯಾರ್ಥಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಎಂದು ಆರೋಪಿಸಿ ಪ್ರತಿ ದೂರು ದಾಖಲಿಸಿದ್ದಾರೆ. ನಂತರ ವಿದ್ಯಾರ್ಥಿಯ ಭವಿಷ್ಯ ಹಾಳಾಗುತ್ತದೆ ಎಂಬುದನ್ನು ಅರಿತ ಕಾಲೇಜು ಆಡಳಿತ ಮಂಡಳಿ ಇಬ್ಬರ ನಡುವೆ ಸಂಧಾನ ನಡೆಸಿ ಪ್ರಕರಣ ಇತ್ಯರ್ಥಗೊಳಿಸಿದೆ. ಇದನ್ನೂ ಓದಿ: ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ