ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲೇ ಘನಘೋರ ಕೃತ್ಯವೊಂದು ತಾಲೂಕಿನ (Belagavi) ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಿಳೆಯೊಬ್ಬಳನ್ನು (Woman) ನಗ್ನವಾಗಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.
ಪ್ರೀತಿಸಿದ ಯುವತಿ ಜೊತೆ ಮಹಿಳೆಯ ಮಗ ಮನೆಬಿಟ್ಟು ಹೋಗಿದ್ದಕ್ಕೆ ಆತನ ತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ಪ್ರೇಮಿಗಳು ಮನೆಬಿಟ್ಟು ಹೋದ ವಿಚಾರ ತಿಳಿಯುತ್ತಿದ್ದಂತೆ, ರಾತ್ರೋ ರಾತ್ರಿ ಯುವತಿಯ ಕುಟುಂಬಸ್ಥರು ಯುವಕನ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಬಾಗಿಲು ಮುರಿದು ಒಳಗೆ ಮಲಗಿದ್ದ ಮಹಿಳೆಯ ಮೆರವಣಿಗೆ ಮಾಡಿ, ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಕ್ಯಾಂಡಲ್ ಬೆಳಕಲ್ಲಿ ಬೈಕಿಗೆ ಪೆಟ್ರೋಲ್ ಹಾಕುತ್ತಿದ್ದ ಬಾಲಕಿ ಬೆಂಕಿಗೆ ಬಲಿ
Advertisement
Advertisement
ಮಹಿಳೆಯ ಮಗ ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಇದಕ್ಕೆ ಯುವತಿಯ ಕುಟುಂಬಸ್ಥರ ವಿರೋಧವಿತ್ತು. ಅಲ್ಲದೇ ಆಕೆಗೆ ಬೇರೆ ಯುವಕನ ಜೊತೆ ಮದುವೆ (Marriage) ಮಾಡಲು ಮುಂದಾಗಿದ್ದರು ಎಂದು ತಿಳಿದು ಬಂದಿದೆ. ಈ ವಿಚಾರ ಯುವಕನಿಗೆ ತಿಳಿಯುತ್ತಿದ್ದಂತೆ ಮಧ್ಯರಾತ್ರಿಯೇ ಯುವತಿಯೊಂದಿಗೆ ಪರಾರಿಯಾಗಿದ್ದ. ಇದರಿಂದ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು ಈ ಕೃತ್ಯ ಎಸಗಿದ್ದಾರೆ.
Advertisement
Advertisement
ಮಹಿಳೆಯರು ಸೇರಿದಂತೆ ಒಂಬತ್ತು ಜನರಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಕಾಕತಿ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮಂಡ್ಯ ಬಸ್ ಹತ್ತುವಾಗ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು