Tuesday, 28th January 2020

ಕಲಾಪ ಶುಕ್ರವಾರಕ್ಕೆ ಮುಂದೂಡಿಕೆ- ಬಿಜೆಪಿಯಿಂದ ಅಹೋರಾತ್ರಿ ಧರಣಿ

ಬೆಂಗಳೂರು: ಗದ್ದಲ-ಗಲಾಟೆಗಳ ಗೂಡಾಗಿ ಸದನ ಬದಲಾಗಿತ್ತು. ಹಾಗಾಗಿ ಉಪಾಧ್ಯಕ್ಷ ಕೃಷ್ಣಾ ರೆಡ್ಡಿ ಸದನವನ್ನು ನಾಳೆಗೆ ಮುಂದೂಡಿಕೆ ಮಾಡಿದರು.

ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ನವರು, ನಾವು ಎಲ್ಲಿ ಹೋಗಲ್ಲ. ನಮ್ಮ ಎಲ್ಲ ಶಾಸಕರೊಂದಿಗೆ ಸದನದಲ್ಲಿಯೇ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಹೇಳಿದ್ದಾರೆ. ವಿಶ್ವಾಸಮತಯಾಚನೆ ಮಾಡದೇ ಸಿಎಂ ಹಾಗೂ ಸರ್ಕಾರದ ನಾಯಕರು ಅನಾವಶ್ಯಕವಾಗಿ ಸಮಯ ವ್ಯಯಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಇತ್ತ ಕಾಂಗ್ರೆಸ್ ನಾಯಕರೆಲ್ಲರೂ ಶಾಸಕ ಶ್ರೀಮಂತ ಪಾಟೀಲ್ ಆಸ್ಪತ್ರೆಗೆ ದಾಖಲಾಗಿರುವ ಫೋಟೋಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಬಿಜೆಪಿಯ ಲಕ್ಷ್ಮಣ್ ಸವದಿ ಅವರೇ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಮುಂಬೈಗೆ ಕರೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದರು.

Leave a Reply

Your email address will not be published. Required fields are marked *