– ಜಲಂಧರ್ ಪಶ್ಚಿಮ ಕ್ಷೇತ್ರ ಗೆದ್ದು ಬೀಗಿದ ಎಎಪಿ
ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ (Assembly Pypolls) ಮತ ಎಣಿಕೆ ಇಂದು ಪ್ರಕಟವಾಗಲಿದ್ದು, ಈಗಾಗಲೇ ಇಂಡಿಯಾ ಒಕ್ಕೂಟ (INDIA Bloc) 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. 13ರ ಪೈಕಿ ಕಾಂಗ್ರೆಸ್ 5, ಟಿಎಂಸಿ 4 ಹಾಗೂ ಬಿಜೆಪಿ, ಡಿಎಂಕೆ, ಎಎಪಿ ಮತ್ತು ಜೆಡಿಯು ತಲಾ ಒಂದು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಇದನ್ನೂ ಓದಿ: ಕಾನೂನು ವಿದ್ಯಾರ್ಥಿಗಳ ಪಠ್ಯದಲ್ಲಿ ಮನಸ್ಮೃತಿ ಇಲ್ಲ: ಕೇಂದ್ರ ಶಿಕ್ಷಣ ಸಚಿವ ಸ್ಪಷ್ಟನೆ
ಹಿಮಾಚಲ ಪ್ರದೇಶದ ಡೆಹ್ರಾ ಮತ್ತು ನಲಗಢ, ಉತ್ತರಾಖಂಡದ ಬದರಿನಾಥ್ ಮತ್ತು ಮಂಗಳೌರ್ ಹಾಗೂ ಮಧ್ಯಪ್ರದೇಶದ ಅವರ್ವಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಇತ್ತ ಪಶ್ಚಿಮ ಬಂಗಾಳದ ರಾಯಗಂಜ್, ರಾಣಾಘಾಟ್ ದಕ್ಷಿಣ, ಬಾಗ್ಡಾ ಮತ್ತು ಮಾಣಿಕ್ತಾಲಾ ಸ್ಥಾನಗಳಲ್ಲಿ ಟಿಎಂಸಿ ಮುಂದಿದೆ.
ಪಂಜಾಬ್‌ನ ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ ಎಎಪಿ ಗೆಲುವು ದಾಖಲಿಸಿದೆ. ಬಿಹಾರದ ರುಪೌಲಿ ಕ್ಷೇತ್ರದಲ್ಲಿ ಜೆಡಿಯು, ಹಿಮಾಚಲ ಪ್ರದೇಶದ ಹಮೀರ್‌ಪುರ ಕ್ಷೇತ್ರದಲ್ಲಿ ಬಿಜೆಪಿ, ತಮಿಳುನಾಡಿನ ವಿಕ್ರವಾಂಡಿ ಕ್ಷೇತ್ರದಲ್ಲಿ ಡಿಎಂಕೆ ಮುನ್ನಡೆ ಸಾಧಿಸಿದೆ. ಇದನ್ನೂ ಓದಿ: ಬರ್ಗರ್ ಕಿಂಗ್ ರೆಸ್ಟೋರೆಂಟ್ ಶೂಟೌಟ್ ಕೇಸ್ – ಮೂವರು ಗ್ಯಾಂಗ್‍ಸ್ಟರ್‌ಗಳ ಎನ್‍ಕೌಂಟರ್