ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ (Assembly Election 2023) ಬಿಜೆಪಿ 65 ಸ್ಥಾನಗಳನ್ನು ಪಡೆದರೆ, ಜೆಡಿಎಸ್ 19 ಹಾಗೂ ಪಕ್ಷೇತರ ಅಭ್ಯರ್ಥಿಗಳು 4 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದರು. ಉಳಿದಂತೆ 136 ಸೀಟುಗಳನ್ನು ಕಾಂಗ್ರೆಸ್ (Congress) ಪಕ್ಷ ಗೆಲ್ಲುವ (Win) ಮೂಲಕ ಅಧಿಕಾರದ ಚುಕ್ಕಾಣೆ ಹಿಡಿದಿದೆ. ಆದರೆ, ಕಾಂಗ್ರೆಸ್ ಪಕ್ಷ ಗೆದ್ದಿದ್ದು ಕೇವಲ 136 ಸೀಟುಗಳಲ್ಲ, 138 ಸೀಟುಗಳು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ಹೇಳಿದರು.
Advertisement
ಗೆಲುವಿನ ನಂತರ ಕೆಪಿಸಿಸಿ ಕಚೇರಿಯಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸುರ್ಜೆವಾಲಾ, ‘ಕಾಂಗ್ರೆಸ್ ಗೆದ್ದಿರುವುದು ಕೇವಲ 136 ಸ್ಥಾನಗಳು ಮಾತ್ರವಲ್ಲ, ಇನ್ನೂ ಎರಡು ಸ್ಥಾನಗಳಲ್ಲೂ ಅದು ಗೆದ್ದಿದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು. ಮುಂದುವರೆದು ಮಾತನಾಡಿದ ಅವರು, ಮೇಲುಕೋಟೆಯ ಸವೋರ್ದಯ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ, ಗೌರಿಬಿದನೂರಿನ ಪಕ್ಷೇತರ ಅಭ್ಯರ್ಥಿ ಕೆ.ಎಚ್. ಪುಟ್ಟಸ್ವಾಮಯ್ಯ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿರುವುದನ್ನು ತಿಳಿಸಿದರು. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ; ಸಿಎಂ ಸ್ಥಾನಕ್ಕೆ ಬೊಮ್ಮಾಯಿ ಇಂದು ರಾಜೀನಾಮೆ LIVE Updates
Advertisement
Advertisement
ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಕಾಂಗ್ರೆಸ್ ಗೆ ಬೆಂಬಲ ನೀಡಿದ್ದರಿಂದ ಕಾಂಗ್ರೆಸ್ ಬಲಾಬಲ ಇದೀಗ 138ಕ್ಕೆ ಏರಿದೆ. ಈ ಮೂಲಕ ರಾಜ್ಯದ ದೊಡ್ಡಪಕ್ಷವಾಗಿ ಹೊರಹೊಮ್ಮಿದೆ. ಈ ಮಾಧ್ಯಮ ಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.