Photo Album: ವಿಧಾನಸಭೆ ಚುನಾವಣೆ 2023 ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮತದಾನ

Public TV
3 Min Read
FotoJet 4

ಕುಟುಂಬ ಸಮೇತ ಸಾಮಾನ್ಯರಂತೆ ಮತದಾನ ಕೇಂದ್ರಕ್ಕೆ ಬಂದ ಡಾಲಿ ಧನಂಜಯ್ ಮತದಾನ ಮಾಡಿದ್ದಾರೆ. ಸಹೋದರಿ, ಸಹೋದರ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಅರಸಿಕೆರೆ ತಾಲ್ಲೂಕು ಕಾಳೇನಹಳ್ಳಿ ಮತದಾನ ಕೇಂದ್ರಕ್ಕೆ ಆಗಮಸಿದ್ದ ಧನಂಜಯ್, ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.

sandalwood stars 19

ಬಿಳಿ ಶರ್ಟ್ ಹಾಗೂ ಲುಂಗಿ ಧರಿಸಿದ್ದ ಧನಂಜಯ್, ತಾವು ಕಲಿತಿದ್ದ ಶಾಲೆಯಲ್ಲೇ ಮತದಾನ ಮಾಡಿ ಸಂಭ್ರಮಿಸಿದ್ದರು. ಅದೇ ಸಮಯದಲ್ಲಿ ಆಗಮಿಸಿದ್ದ ಅಭಿಮಾನಿಗಳ ಜೊತೆ ಸೆಲ್ಫಿಗೆ ಸಹಕರಿಸಿದರು. ನೆಚ್ಚಿನ ನಟನ ಜೊತೆ ಅನೇಕರು ಫೋಟೋ ತಗೆಸಿಕೊಂಡು ಖುಷಿ ಪಟ್ಟರು. ಮತದಾನ ಎಷ್ಟು ಶ್ರೇಷ್ಠ ಎನ್ನುವ ಕುರಿತು ಡಾಲಿ ಮಾತನಾಡಿದರು.

sandalwood stars 3

ಡಿವೈನ್ ಸ್ಟಾರ್, ನಟ ರಿಷಬ್ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವೈಟ್ ಅಂಡ್ ವೈಟ್ ಡ್ರೆಸ್ ನಲ್ಲಿ ಬಂದಿದ್ದ ರಿಷಬ್ ಶೆಟ್ಟಿ ಮತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

sandalwood stars 8

ಬೆಳಗ್ಗೆ 7 ಗಂಟೆಯಿಂದಲೇ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದ್ದು, ದಿನದ ಮೊದಲರ್ಧದಲ್ಲೇ ಸ್ಯಾಂಡಲ್ ವುಡ್ ನ ಬಹುತೇಕ ನಟ-ನಟಿಯರು ಹಾಗೂ ತಂತ್ರಜ್ಞರು ಮತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. ತಮ್ಮ ಹಕ್ಕನ್ನು ಚಲಾಯಿಸುವುದರ ಜೊತೆಗೆ ಅಭಿಮಾನಿಗಳಿಗೆ ಸಂದೇಶವನ್ನೂ ಸಾರಿದ್ದಾರೆ.

sandalwood stars 4

ನಟ ಯಶ್ ಕತ್ರಿಗುಪ್ಪೆಯಲ್ಲಿ ಮತದಾನ ಮಾಡಿದರೆ, ಸುದೀಪ್ ಪುಟ್ಟೇನಹಳ್ಳಿ, ಶಿವರಾಜ್ ಕುಮಾರ್ ಬ್ಯಾಟರಾಯನ ಪುರ (ರಾಚೇನಹಳ್ಳಿ), ರವಿಚಂದ್ರನ್ ರಾಜಾಜಿನಗರ, ಉಪೇಂದ್ರ ಕತ್ರಿಗುಪ್ಪೆ, ಧ್ರುವ ಸರ್ಜಾ ತ್ಯಾಗರಾಜನಗರ(ಶಾಸ್ರ್ತಿ ನಗರ)

sandalwood stars 13

ರಾಘವೇಂದ್ರ ರಾಜ್ ಕುಮಾರ್  ಸದಾಶಿವನಗರ, ಅಶ್ವಿನಿ ಪುನೀತ್ ರಾಜ್ ಕುಮಾರ್ ಸದಾಶಿವನಗರ, ರಾಧಿಕ ಪಂಡಿತ್ ದೇವಯ್ಯ ಪಾರ್ಕ್, ಸುಧಾರಾಣಿ ಮಲ್ಲೇಶ್ವರಂ, ರಕ್ಷಿತಾ ಪ್ರೇಮ್ ಚಂದ್ರ ಲೇಔಟ್ ಪ್ರೇಮ್ ಚಂದ್ರ ಲೇಔಟ್ ನಲ್ಲಿ ತಮ್ಮ ಮತದಾನ ಮಾಡಿದ್ದಾರೆ.

sandalwood stars 2

ಅಮೂಲ್ಯ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ನೆನಪಿರಲಿ ಪ್ರೇಮ್ ಆರ್ ಆರ್ ನಗರ,  ರಚಿತಾ ರಾಮ್ ಆರ್ ಆರ್ ನಗರ, ಮೇಘನಾ ಸರ್ಜಾ ಜೆಪಿ ನಗರ, ತಾರಾ ಜೆ ಪಿ ನಗರ, ದ್ವಾರಕೀಶ್ ಬೊಮ್ಮನಹಳ್ಳಿ, ಸೃಜನ್ ಲೋಕೇಶ್  ಕತ್ರಿಗುಪ್ಪೆ, ಅಜಯ್ ರಾವ್ ರಾಜಾಜಿನಗರ, ಬಿ.ಸರೋಜದೇವಿ ಮಲ್ಲೇಶ್ವರಂ

WhatsApp Image 2023 05 10 at 12.44.20 PM

 ಹರ್ಷಿಕಾ ಪೂಣಚ್ಚ ಕೆ ಆರ್ ಪುರ, ಪೂಜಾ ಗಾಂಧಿ  ಕತ್ರಿಗುಪ್ಪೆ, ಯೋಗರಾಜ್ ಭಟ್ ಗಿರಿ ನಗರ, ಅನಂತ್ ನಾಗ್  ಮಲ್ಲೇಶ್ವರಂ ಮತ ಕೇಂದ್ರಗಳಲ್ಲಿ ತಮ್ಮ ಮತದಾನ ಮಾಡಿದ್ದಾರೆ.

sandalwood stars 12

ಚಂದನ್ ಶೆಟ್ಟಿ ನಾಗರಭಾವಿಯಲ್ಲಿ ಮತದಾನ ಮಾಡಿದರೆ, ಕಾರುಣ್ಯ ರಾಮ್ ಆರ್ ಆರ್ ನಗರ, ಅವಿನಾಶ್  ಆರ್ ಆರ್ ನಗರ, ಜಗ್ಗೇಶ್ ಮಲ್ಲೇಶ್ವರಂ, ಶರಣ್ ಹೊಸಕೆರೆಹಳ್ಳಿ, ದುನಿಯಾ ವಿಜಯ್ ಕತ್ತಿಗುಪ್ಪೆ,  ಸಾಧು ಕೋಕಿಲ ನಾಗರಭಾವಿ, ಅರ್ಜುನ್ ಜನ್ಯ ಹೆಬ್ಬಾಳ, ಶ್ರೀಮುರುಳಿ ವಸಂತನಗರ, ವಿಜಯ್ ರಾಘವೇಂದ್ರ ಯಲಹಂಕ

sandalwood stars 18

 ಸಪ್ತಮಿಗೌಡ ಜೆ ಪಿ ನಗರ, ರಮೇಶ್ ಅರವಿಂದ್ ಪದ್ಮನಾಭ ನಗರ, ಮಾಲಾಶ್ರೀ ಶಿವಾಜಿನಗರದಲ್ಲಿ ಮತ ಚಲಾವಣೆ ಮಾಡಿದ್ದಾರೆ.

sandalwood stars 10

ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ಶ್ರುತಿ ಹೊಸಕೆರೆ ಹಳ್ಳಿ,  ಭಾರತಿ ಜಯನಗರ, ಅನಿರುದ್ದ್ ಜಯನಗರ, ಅಭಿಷೇಕ್ ಅಂಬರೀಶ್ ಹಾಗೂ ಸುಮಲತಾ ಅಂಬರೀಶ್ ಜೆ ಪಿ ನಗರ, ಪ್ರಶಾಂತ್ ನೀಲ್ ವಸಂತನಗರದಲ್ಲಿ ತಮ್ಮ ಮತದಾನದ ಹಕ್ಕುಗಳನ್ನು ಚಲಾಯಿಸಿದ್ದಾರೆ.

sandalwood stars 6

ರಿಷಬ್ ಶೆಟ್ಟಿ ಕೆರಾಡಿ, ಕುಂದಾಪುರ, ರಕ್ಷಿತ್ ಶೆಟ್ಟಿ ಉಡುಪಿ, ರಾಜ್ ಬಿ ಶೆಟ್ಟಿ ಉಡುಪಿ, ನಿಖಿಲ್ ಕುಮಾರಸ್ವಾಮಿ ಕೇತಗನಹಳ್ಳಿ (ಬಿಡದಿ), ಡಾಲಿ ಧನಂಜಯ ಅರಸೀಕೆರೆ, ಅಶಿಕಾ ರಂಗನಾಥ್ ತುಮಕೂರು, ಚಿಕ್ಕಣ್ಣ ಮೈಸೂರು, ಲೀಲಾವತಿ ಸೋಲದೇವನಹಳ್ಳಿ, ವಿನೋದ್ ರಾಜ್ ಸೋಲದೇವನ ಹಳ್ಳಿ, ದೊಡ್ಡಣ್ಣ ಬಿದರುಕಲ್ಲು ಮತದಾನ ಮಾಡಿದ್ದಾರೆ.

Share This Article