ನವದೆಹಲಿ: ಜಮ್ಮು-ಕಾಶ್ಮೀರ (Jammu Kashmir) ಹಾಗೂ ಹರಿಯಾಣ (Haryan) ವಿಧಾನಸಭೆಗಳಿಗೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜಮ್ಮು-ಕಾಶ್ಮೀರದಲ್ಲಿ 3 ಹಂತ ಹಾಗೂ ಹರಿಯಾಣದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಜಮ್ಮು-ಕಾಶ್ಮೀರದಲ್ಲಿ 3 ಹಂತಗಳಲ್ಲಿ (ಸೆ.18, ಸೆ.25, ಅ.1) ಚುನಾವಣೆ ನಡೆಯಲಿದೆ. ಹರಿಯಾಣದಲ್ಲಿ ಅ.1 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ಕ್ಕೆ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಆಯುಕ್ತರಾದ ಸುಖ್ಬಿರ್ ಸಿಂಗ್, ಜ್ಞಾನೇಶ್ ಕುಮಾರ್ ಭಾಗಿಯಾಗಿದ್ದರು. ಇದನ್ನೂ ಓದಿ: ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ
Advertisement
Advertisement
ಜಮ್ಮು ಕಾಶ್ಮೀರದಲ್ಲಿ 90 ವಿಧಾನಸಭೆ ಕ್ಷೇತ್ರಗಳಿದ್ದು, 87.09 ಲಕ್ಷ ಮತದಾರರು ನೋಂದಣಿಯಾಗಿದ್ದಾರೆ. 44.46 ಪುರುಷರು, 42 ಲಕ್ಷ ಮಹಿಳಾ ಮತದಾರರು ಇದ್ದಾರೆ. 11,838 ಮತದಾನ ಕೇಂದ್ರಗಳು ನಿರ್ಮಾಣಗೊಂಡಿವೆ. ಗ್ರಾಮೀಣ ಭಾಗದಲ್ಲಿ 9,506 ಹಾಗೂ ನಗರ ಭಾಗದಲ್ಲಿ 2,332 ಮತದಾನ ಬೂತ್‌ಗಳ ನಿರ್ಮಾಣವಾಗಿದೆ.
Advertisement
Advertisement
ಹರಿಯಾಣದಲ್ಲಿ 90 ವಿಧಾನಸಭೆ ಕ್ಷೇತ್ರಗಳಿದ್ದು, 2.01 ಕೋಟಿ ಮತದಾರರು ನೋಂದಣಿಯಾಗಿದ್ದಾರೆ. 20,629 ಮತದಾನ ಕೇಂದ್ರಗಳ ನಿರ್ಮಾಣವಾಗಿವೆ. ಗ್ರಾಮೀಣ ಭಾಗದಲ್ಲಿ 13,497 ಹಾಗೂ ನಗರ ಭಾಗದಲ್ಲಿ 7132 ಮತದಾನ ಕೇಂದ್ರಗಳಿವೆ. ಇದನ್ನೂ ಓದಿ: 2027 ರ ವೇಳೆಗೆ ಭಾರತ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಭರವಸೆ ಇದೆ: ಡಾ. ಗೀತಾ ಗೋಪಿನಾಥ್