ಪಂಚರಾಜ್ಯ ಚುನಾವಣೆ: ಪ್ರಜಾಪ್ರಭುತ್ವದ ಹಬ್ಬ ಮಾಡಿ: ಮೋದಿ

Public TV
1 Min Read
NARENDRA MODI

ನವದೆಹಲಿ: ಉತ್ತರಾಖಂಡ, ಗೋವಾ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಇಂದಿನಿಂದ ಮತದಾನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ದಾಖಲೆ ಮಟ್ಟದಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ತಿಳಿಸಿದರು.

ಟ್ವೀಟ್‍ನಲ್ಲಿ ಏನಿದೆ?: ಉತ್ತರಾಖಂಡ, ಗೋವಾ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮತದಾನ ನಡೆಯಲಿದೆ. ಇಂದು ಮತ ಚಲಾಯಿಸಲು ಅರ್ಹರಾಗಿರುವ ಎಲ್ಲರೂ ದಾಖಲೆ ಮಟ್ಟದಲ್ಲಿ ಮತದಾನ ಮಾಡಿ. ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ಎಂದು ಟ್ವೀಟ್‍ನಲ್ಲಿ ಕರೆ ನೀಡಿದರು.

ಗೋವಾ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ವಿಧಾನಸಭೆ ಚುನಾವಣೆಗೆ ಇಂದಿನಿಂದ ಮತದಾನ ಆರಂಭವಾಗಲಿದೆ. ಈ ಎಲ್ಲಾ ರಾಜ್ಯಗಳಲ್ಲಿ ಈಗಾಗಲೇ ಬಿಜೆಪಿ ಅಧಿಕಾರದಲ್ಲಿದೆ. ಇದನ್ನೂ ಓದಿ: ಅಗತ್ಯ ಬಿದ್ದರೆ ಬೊಗಳುತ್ತೇನೆ, ಇಲ್ಲವೇ ಕಚ್ಚುತ್ತೇನೆ: ಹರೀಶ್ ರಾವತ್

voting

ಉತ್ತರ ಪ್ರದೇಶದಲ್ಲಿ 403 ವಿಧಾನಸಭಾ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದು ಎರಡನೇ ಹಂತದ ಮತದಾನ ಆರಂಭವಾಗಿದೆ. ಮೊದಲ ಹಂತ ಫೆ.10ರಂದು ನಡೆದಿತ್ತು. ಗೋವಾ ಮತ್ತು ಉತ್ತರಾಖಂಡದಲ್ಲಿ ಕ್ರಮವಾಗಿ 40 ಮತ್ತು 70 ವಿಧಾನಸಭಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ನಾನು ಹೃದಯದಿಂದ ಮುಸ್ಲಿಂ ಮಗಳು, ಹಿಜಬ್‍ನಿಂದಲ್ಲ: ಕಾಶ್ಮೀರ ಟಾಪರ್

Share This Article
Leave a Comment

Leave a Reply

Your email address will not be published. Required fields are marked *