ಲಕ್ನೊ: ತೀವ್ರ ಕುತೂಹಲ ಮೂಡಿಸಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದಿನಿಂದ ಮತದಾನ ನಡೆಯಲಿದೆ.
ಇಂದು ಮೊದಲ ಹಂತದಲ್ಲಿ 11 ಜಿಲ್ಲೆಯ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೂ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಮತದಾನ ಪ್ರಕ್ರಿಯೆಗಳು ನಡೆಯಲಿದೆ. ಮೊದಲ ಹಂತದ ಈ ಚುನಾವಣೆ ಪಶ್ಚಿಮ ಉತ್ತರ ಪ್ರದೇಶದಲ್ಲಿದ್ದು, ಇದು ಉಳಿದ ಹಂತದ ಮತದಾನದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ. ಇದನ್ನೂ ಓದಿ: ಶುಭ ಸುದ್ದಿ – ಅಂತಿಮ ಹಂತದಲ್ಲಿದೆ 5ಜಿ ನೆಟ್ವರ್ಕ್
Advertisement
Advertisement
ಮೂರು ಕೃಷಿ ಕಾನೂನುಗಳು ಮತ್ತು ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಈ ಪ್ರದೇಶದಲ್ಲಿ ಬಿಜೆಪಿ ಕೊಂಚ ಕಷ್ಟ ಎದುರಿಸಲಿದ್ದು, ಎಸ್‍ಪಿ ಮತ್ತು ಆರ್‍ಎಲ್‍ಡಿಗೆ ಪೂರಕವಾಗಿ ವಾತಾವರಣ ನಿರ್ಮಾಣವಾಗಿದೆ. ಜಾಟ್ ಮತ್ತು ಮುಸ್ಲಿಂ ಮತಗಳು ನಿರ್ಣಾಯಕ ವಾಗಿದ್ದು ಬಿಎಸ್‍ಪಿ ಮುಸ್ಲಿಂ ಮತಗಳನ್ನು ಕೇಂದ್ರಿಕರಿಸಿದೆ.
Advertisement
ಮೊದಲ ಹಂತದಲ್ಲಿ ಸಚಿವರಾದ ಶ್ರೀಕಾಂತ್ ಶರ್ಮಾ, ಸುರೇಶ್ ರಾಣಾ, ಸಂದೀಪ್ ಸಿಂಗ್, ಕಪಿಲ್ ದೇವ್ ಅಗರ್ವಾಲ್, ಅತುಲ್ ಗಾರ್ಗ್ ಮತ್ತು ಚೌಧುರಿ ಲಕ್ಷ್ಮಿ ನಾರಾಯಣ್ ಸೇರಿದಂತೆ ಹಲವು ನಾಯಕರ ಭವಿಷ್ಯ ನಿರ್ಧಾರವಾಗಲಿದೆ. ಇದನ್ನೂ ಓದಿ: ಭೂಕಾಂತೀಯ ಬಿರುಗಾಳಿಗೆ ಸ್ಟಾರ್‌ಲಿಂಕ್ನ 40 ಉಪಗ್ರಹಗಳು ನಾಶ