ಶ್ರೀನಗರ: ಕಾಶ್ಮೀರದ ಜನ ತಮ್ಮ ಮತಗಳಿಂದ ಸರ್ಕಾರವನ್ನು ಆಯ್ಕೆ ಮಾಡಿಕೊಳ್ಳುವ ದಿನಗಳು ದೂರ ಉಳಿದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಕಾಂಪ್ಲೆಕ್ಸ್‍ನಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ಪ್ರಾರಂಭವಾಗಿವೆ. ನಿಮ್ಮ ಮತದಿಂದ ನೀವು ಸರ್ಕಾರವನ್ನು ಆಯ್ಕೆ ಮಾಡುವ ಸಮಯ ಬಹಳ ದೂರವಿಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ನಮೋ ಜಮ್ಮು-ಕಾಶ್ಮೀರ ಪ್ರವಾಸ ಇಂದಿನಿಂದ ಆರಂಭ – ಬಿಗಿ ಭದ್ರತೆ ನಿಯೋಜನೆ
Advertisement
ನಾನೇಕೆ ಕಾಶ್ಮೀರಕ್ಕೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ ಎಂದು ಯೋಚಿಸುತ್ತಿದ್ದೆ. ಅದಕ್ಕೆ 2 ಕಾರಣಗಳಿವೆ, ಒಂದು ಇಲ್ಲಿ ಅಭಿವೃದ್ಧಿ ಕೆಲಸ ಮತ್ತು ಎರಡನೆಯದು ಲೋಕಸಭಾ ಚುನಾವಣೆಯಲ್ಲಿ ಜನರ ಭಾಗವಹಿಸುವಿಕೆ ಎಂದು ಅವರು ಹೇಳಿದ್ದಾರೆ.
Advertisement
Advertisement
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370 ಅಡಿಯ ವಿಶೇಷ ಸ್ಥಾನಮಾನ ರದ್ದಾದ ಬಳಿಕ, ಇಲ್ಲಿ ಚುನಾವಣೆ ನಡೆಸಿ ಸ್ವಂತ ಸರ್ಕಾರ ರಚನೆ ಮಾಡುವುದು ಕೆಂದ್ರ ಗೃಹಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವದ ನಿರ್ಧಾರವಾಗಿತ್ತು. ಚುನಾವಣೆಗೆ ಸುಪ್ರೀಂ ಕೋರ್ಟ್ ಸೆಪ್ಟೆಂಬರ್‌ನಲ್ಲಿ ಗಡುವು ನೀಡಿದ ನಂತರ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಲಾಗಿದೆ.
Advertisement
ಪ್ರಧಾನಿ ಮೋದಿ (Narendra Modi) ಅವರ 2 ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಇಂದು (ಗುರುವಾರ) ಆರಂಭವಾಗಿದೆ. 3ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ಮೋದಿ ಅವರ ಮೊದಲ ಭೇಟಿಯೂ ಇದಾಗಿದೆ. ಶ್ರೀನಗರದಲ್ಲಿ (Srinagar) ಜೂನ್ 21ರಂದು (ಶುಕ್ರವಾರ) ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಹಂತಗಳಲ್ಲಿ ಭದ್ರತೆ ನಿಯೋಜಿಸಲಾಗಿದೆ. ಇದನ್ನೂ ಓದಿ: ಸಮುದ್ರದ ಮಧ್ಯೆ ಚೀನಾ-ಫಿಲಿಪ್ಪೈನ್ಸ್ ಸೇನೆಗಳ ನಡುವೆ ಜಟಾಪಟಿ