ನಟ, ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಭಾರೀ ಅಂತರದಿಂದಲೇ ಗೆಲುವು ಸಾಧಿಸುತ್ತಾರೆ ಎಂದು ನಂಬಲಾಗಿತ್ತು. ಆದರೆ, ಆ ನಂಬಿಕೆಯನ್ನು ಹುಸಿಮಾಡಿದ್ದಾರೆ ರಾಮನಗರ (Ramanagara) ವಿಧಾನಸಭಾ ಮತದಾರರು. ಮಗನಿಗಾಗಿ ಶಾಸಕಿ ಅನಿತಾ ಕುಮಾರಸ್ವಾಮಿ ಕ್ಷೇತ್ರವನ್ನೇ ತ್ಯಾಗ ಮಾಡಿದ್ದರು. ಆ ತ್ಯಾಗವೂ ಮಗನಿಗಾಗಿ ಫಲಿಸಲಿಲ್ಲ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ (Iqbal Hussain) ಗೆಲುವು ಸಾಧಿಸಿದ್ದಾರೆ.
Advertisement
ಈ ಹಿಂದೆ ಲೋಕಸಭಾ ಚುನಾವಣೆಯಲ್ಲೂ ನಿಖಿಲ್ ಸ್ಪರ್ಧಿಸಿದ್ದರು. ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿದ್ದರು. ಅಲ್ಲಿಯೂ ನಿಖಲ್ ಸೋತಿದ್ದರು. ರಾಮನಗರದಲ್ಲಿ ಸತತವಾಗಿ ಗೆದ್ದಿದ್ದ ಜೆಡಿಎಸ್ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ. ಈ ಮೂಲಕ ತಾಯಿಯ ಕ್ಷೇತ್ರವನ್ನೇ ನಿಖಿಲ್ ಕಾಂಗ್ರಸ್ ಗೆ ಬಿಟ್ಟುಕೊಟ್ಟಿದ್ದಾರೆ. ಇದನ್ನೂ ಓದಿ: Karnataka Election 2023 Result – ಬಿಜೆಪಿ ಭದ್ರಕೋಟೆ ಕೊಡಗು ಛಿದ್ರಗೊಳಿಸಿದ ಕಾಂಗ್ರೆಸ್ LIVE Updates
Advertisement
Advertisement
2018ರಲ್ಲಿ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರದಲ್ಲೂ ಗೆದ್ದಿದ್ದರು. ರಾಮನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಉಪ ಚುನಾವಣೆಗೆ ಪತ್ನಿ ಅನಿತಾ ಕುಮಾರ್ ಸ್ವಾಮಿಗೆ ಟಿಕೆಟ್ ನೀಡಿದ್ದರು. ಅನಿತಾ ಕುಮಾರಸ್ವಾಮಿ ಶಾಸಕರಾಗಿ ಆಯ್ಕೆಯಾಗಿ, ಈ ಚುನಾವಣೆಯಲ್ಲಿ ಆ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟಿದ್ದರು.
Advertisement
ಚುನಾವಣೆ ಆಯೋಗದ ವೆಬ್ ಸೈಟ್ ನಲ್ಲಿ ಪ್ರಕಟಿಸಿರುವಂತೆ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ 85003 ಮತಗಳನ್ನು ಪಡೆದಿದ್ದರೆ, ನಿಖಿಲ್ ಕುಮಾರಸ್ವಾಮಿ 73910 ಮತಗಳನ್ನು ಪಡೆದಿದ್ದಾರೆ. ಗೆದ್ದ ಅಭ್ಯರ್ಥಿಗಿಂತ 11093 ಕಡಿಮೆ ಮತಗಳನ್ನು ನಿಖಿಲ್ ಪಡೆದುಕೊಳ್ಳುವ ಮೂಲಕ ಗೆಲುವಿನ ಹಾರವನ್ನು ಇಕ್ಬಾಲ್ ಕೊರಳಿಗೆ ಬೀಳುವಂತೆ ಮಾಡಿದ್ದಾರೆ.