ಧಾರವಾಡ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು (Lokayukta Police) ಸಲ್ಲಿಸಿದ್ದ ದೋಷಾರೋಪ ಪಟ್ಟಿ ಪರಿಶೀಲಿಸಿದ ಧಾರವಾಡದ (Dharwad) 3ನೇ ಅಧಿಕ, ಸೆಷನ್ಸ್ ಹಾಗೂ ವಿಶೇಷ ನ್ಯಾಯಾಲಯವು (Court) ಅಧಿಕಾರಿಯೊಬ್ಬರಿಗೆ 1 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಸಹಾಯಕ ನಿರ್ದೇಶಕರಾಗಿದ್ದ ನೂರ್ ಅಹ್ಮದ್ ಖಾನ್ ಎಂಬಾತನೇ ಶಿಕ್ಷೆಗೆ ಗುರಿಯಾದ ಅಧಿಕಾರಿ. ಇದನ್ನೂ ಓದಿ: ಬ್ಯಾಟಿಂಗ್‌ನಲ್ಲಿ ಕೈಕೊಟ್ಟರೂ ಬೌಲಿಂಗ್‌ನಲ್ಲಿ ಕೈಹಿಡಿದ ಮ್ಯಾಕ್ಸಿ – ಪಂದ್ಯ ಸೋತು ಸರಣಿ ಗೆದ್ದ ಭಾರತ
Advertisement
Advertisement
ನೂರ್ ಅಹ್ಮದ್ ಖಾನ್ ಅವರ ಮೇಲೆ 2010ರ ನವೆಂಬರ್ 15 ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ: ಬೆಂಗ್ಳೂರು-ಹೊಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್; ಗಂಟೆಗಟ್ಟಲೆ ನಿಂತಲ್ಲೇ ನಿಂತ ವಾಹನಗಳು
Advertisement
Advertisement
ಇಂದು ವಿಚಾರಣೆ ನಡೆಸಿದ ಕೋರ್ಟ್ ನೂರ್ ಅಹ್ಮದ್‌ಖಾನ್ ಅವರ ಮೇಲಿನ ಆರೋಪ ಸಾಬೀತಾಗಿದ್ದು, ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ಜೊತೆಗೆ 25 ಸಾವಿರ ರೂ. ದಂಡ ವಿಧಿಸಿದೆ.
Web Stories