ಬೆಂಗಳೂರು: ಅಸಿಸ್ಟೆಂಟ್ ಫ್ರೊಫೆಸರ್ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಿಯಾಗ್ರಫಿ ಪ್ರೊಫೆಸರ್ ನಾಗರಾಜ್‍ನನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.
ನಾಗರಾಜ್, ಧಾರವಾಡ ಕರ್ನಾಟಕ ಯೂನಿವರ್ಸಿಟಿಯ ವ್ಯಾಲ್ಯುಯೇಷನ್ ರಿಜಿಸ್ಟ್ರಾರ್ ಆಗಿದ್ದು, ಇದೀಗ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನಿರ್ಲಕ್ಷ್ಯ ಹಿನ್ನೆಲೆ ಅರೆಸ್ಟ್ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಲೀಕ್ ನಲ್ಲಿ ಭಾಗಿ ಹಿನ್ನೆಲೆ ನಾಗರಾಜ್ ತಂಗಿ ಮಗಳು ಕುಸುಮಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಶ್ನೆ ಪತ್ರಿಕೆ ತಯಾರಿ ವೇಳೆ ಸೌಮ್ಯಳಿಗೆ ಫೋಟೋ ತೆಗೆದು ಕುಸುಮ ಕಳಿಸಿದ್ದಳು. ಅಕ್ರಮದಲ್ಲಿ ಭಾಗಿ ಹಿನ್ನೆಲೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ – ಸೌಮ್ಯಾಗೆ 13 ದಿನ ಪೊಲೀಸ್ ಕಸ್ಟಡಿ
ಈ ಬಗ್ಗೆ ಪೊಲೀಸ್ ಕಮೀಷನರ್ ಕಮಲ್ ಪಂತ್ ಮಾತನಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಮಾರ್ಚ್ ನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಆ ವೇಳೆ ಕೆಲವು ಅಭ್ಯರ್ಥಿಗಳಿಗೆ ಪ್ರಶ್ನೆಗಳು ಸಿಕ್ಕಿತ್ತು. ಈ ಸಂಬಂಧ ಪರೀಕ್ಷಾ ಪ್ರಾಧಿಕಾರ ದೂರು ನೀಡಿದ್ದರು. ಕೇಸ್ ದಾಖಲಿಸಿಕೊಂಡ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಸದ್ಯ ಇಬ್ಬರು ಆರೋಪಿಗಳನ್ನ ಬಂಧಿಸಿದ್ದೇವೆ ಎಂದರು. ಇದನ್ನೂ ಓದಿ: ಅಸಿಸ್ಟೆಂಟ್ ಪ್ರೊಫೆಸರ್ ಎಕ್ಸಾಮ್‍ನಲ್ಲೂ ಗೋಲ್ಮಾಲ್- ಕಾಸು ಕೊಟ್ರೆ ಸರ್ಕಾರಿ ಹುದ್ದೆ..?
ಆರೋಪಿಗಳಿಗೆ ಸಂಬಂಧಿಸಿದಂತೆ ಮನೆ, ಸಂಬಂಧಪಟ್ಟ ಸ್ಥಳಗಳಲ್ಲೂ ಪರಿಶೀಲನೆ ಮಾಡ್ತಿದ್ದೇವೆ. ಎಲ್ಲಾ ಮಾಹಿತಿ ಸಂಗ್ರಹಿಸಿ, ಇನ್ನು ಕೆಲವ್ರನ್ನ ಮೇಲೆ ಶಂಕೆ ಬಂದಿದೆ. ಹೀಗಾಗಿ ಅಕ್ರಮದಲ್ಲಿ ಭಾಗಿಯಾಗಿರುವ ಉಳಿದವ್ರನ್ನು ಬಂಧಿಸಿ, ತನಿಖೆ ಮಾಡಲಾಗುತ್ತೆ. ಸದ್ಯ ಪ್ರೊಫೆಸರ್ ನಾಗರಾಜ್‍ನನ್ನ ಸಹ ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಕಮಲ್ ಪಂತ್ ತಿಳಿಸಿದ್ದಾರೆ.