ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಸಚಿವ ಅಶ್ವಥ್ ನಾರಾಯಣ್ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇಂದು ಸದನದಲ್ಲಿಯೂ ಈ ಬಗ್ಗೆ ಚರ್ಚೆ ನಡೆಸಲಾಯಿತು. ಈ ವೇಳೆ ಸಚಿವ ಮಾಧುಸ್ವಾಮಿ (Madhuswamy) ಅವರು ಸ್ಪಷ್ಟನೆ ನೀಡಿ ಮನವಿ ಮಾಡಿಕೊಂಡರು.
Advertisement
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಅಶ್ವಥ್ ನಾರಾಯಣ್ (Ashwathnarayan) ಅವರು ಭಾವೋದ್ವೇಗದಲ್ಲಿ ಮಾತನಾಡಿದ್ರು. ತಮ್ಮ ಹೇಳಿಕೆ ಬಗ್ಗೆ ವಿಷಾದ ಕೂಡ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಇದನ್ನ ಇಲ್ಲಿಗೇ ಬಿಟ್ಬಿಡೋಣ ಎಂದರು. ಸಿದ್ದರಾಮಯ್ಯ (Siddaramaiah) ಕುರಿತ ಅಶ್ವಥ್ ನಾರಾಯಣರ ವಿವಾದಾತ್ಮಕ ಹೇಳಿಕೆ ಬಗ್ಗೆ ಚರ್ಚೆ ಸಾಕು, ಬಿಟ್ಟುಬಿಡಿ ಅಂತ ಸಚಿವರು ಮನವಿ ಮಾಡಿಕೊಂಡರು. ಇದನ್ನೂ ಓದಿ: ನಿಮ್ಮಂಥವರು MLA ಆಗಿರೋದೇ ಸದನಕ್ಕೆ ಅಗೌರವ- ಕಾಂಗ್ರೆಸ್ ಸದಸ್ಯರ ವಿರುದ್ಧ ಸಿಡಿದ ಕಾಗೇರಿ
Advertisement
ಸದನದಲ್ಲೇನಾಯ್ತು..?: ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು ಎನ್ನುವ ಅಶ್ವಥ್ ನಾರಾಯಣ ಹೇಳಿಕೆಗೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಇದೇ ವೇಳೆ ಶಾಸಕ ಈಶ್ವರ್ ಖಂಡ್ರೆ ಸೇರಿದಂತೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಸ್ಪೀಕರ್ ವಿರುದ್ಧ ಅಸಮಾಧಾನ ಹೊರಹಾಕಿದರು.
Advertisement
Advertisement
ಇದಕ್ಕೂ ಮುನ್ನ ಮಾತನಾಡಿ, ಯು.ಟಿ ಖಾದರ್, ಈಶ್ವರ್ ಖಂಡ್ರೆ ಈ ವಿಷಯವನ್ನು ಶೂನ್ಯ ವೇಳೆಯಲ್ಲಿ ಮಾತನಾಡಿ, ಸದನಕ್ಕೆ ಗೌರವ ಕೊಡಿ. ನಿಮ್ಮ ಹಿರಿತನಕ್ಕೆ ತಕ್ಕಂತೆ ನಡೆದುಕೊಳ್ಳಿ, ನನ್ನ ಅಧಿಕಾರವನ್ನು ಪೂರ್ಣ ಚಲಾಯಿಸಲು ಅವಕಾಶ ಕೊಡಬೇಡಿ. ಸುಮ್ಮನೆ ಕೂರದಿದ್ದರೇ ನಿಮ್ಮನ್ನು ಸದನದಿಂದ ಹೊರಗೆ ಹಾಕಬೇಕಾಗುತ್ತೆ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ಅಶ್ವಥ್ ನಾರಾಯಣ್ ವಿರುದ್ಧ ಬೆಂಗಳೂರು, ಹುಬ್ಬಳ್ಳಿಯಲ್ಲಿ ದೂರು ದಾಖಲು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k