ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್‌ನ ಮಿಲಿಟರಿ ವಿಮಾನ ನಿಲ್ದಾಣದಲ್ಲಿ (Kabul Military Airport) ಸ್ಫೋಟ ಸಂಭವಿಸಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾಬೂಲ್‌ನ ಮಿಲಿಟರಿ ವಿಮಾನ ನಿಲ್ದಾಣದ ಮುಖ್ಯ ಗೇಟ್‌ಗೆ ಸಮೀಪದಲ್ಲಿ ಸ್ಫೋಟ ಸಂಭವಿಸಿದ್ದು, ಅನೇಕರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ (Taliban) ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫೀ ಟಕ್ಕೂರ್ ತಿಳಿಸಿದ್ದಾರೆ. ದಾಳಿ ಜವಾಬ್ದಾರಿಯನ್ನು ಈವರೆಗೂ ಯಾವ ಉಗ್ರ ಸಂಘಟನೆಯೂ ಹೊತ್ತಿಲ್ಲ. ಇದನ್ನೂ ಓದಿ: ಹೊಸ ವರ್ಷ ಆಚರಣೆ ವೇಳೆ ಕಾಲ್ತುಳಿತಕ್ಕೆ ಸಿಲುಕಿ 9 ಮಂದಿ ಸಾವು
ಈಚೆಗಷ್ಟೇ ಉತ್ತರ ತಖಾರ್ ಪ್ರಾಂತ್ಯದ ರಾಜಧಾನಿ ತಾಲೂಕನ್ ನಗರದಲ್ಲಿ ಸ್ಫೋಟವೊಂದು ಸಂಭವಿಸಿತ್ತು. ಈ ವೇಳೆ ನಾಲ್ವರು ಗಾಯಗೊಂಡಿದ್ದರು. ಇದಾದ ಮೂರು ದಿನಗಳಲ್ಲೇ ಮತ್ತೊಂದು ಸ್ಫೋಟ ಸಂಭವಿಸಿದೆ.
ತಾಲಿಬಾನ್ ಭದ್ರತಾ ಕಮಾಂಡರ್ ಅಬ್ದುಲ್ ಮುಬಿನ್ ಸಫಿ, ಸ್ಫೋಟ ಕುರಿತು ಅಧಿಕೃತ ಹೇಳಿಕೆ ನೀಡಿದ್ದಾರೆ. ಅಲ್ಲದೇ ಸ್ಥಳೀಯ ಆಡಳಿತ ಸಿಬ್ಬಂದಿಯ ಮೇಜಿನ ಕೆಳಗೆ ಬಾಂಬ್ ಇರಿಸಲಾಗಿದೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ಇದನ್ನೂ ಓದಿ: ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್