– ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಘೋಷಿಸಿದ ಮಧ್ಯಪ್ರದೇಶ ಸಿಎಂ
ಭೋಪಾಲ್: ದುರ್ಗಾ ಪೂಜೆಯ ಬಳಿಕ ಮೂರ್ತಿಯನ್ನು ವಿಸರ್ಜಿಸಲು (Durga Idol Immersion) ಭಕ್ತರನ್ನು ಕರೆದೊಯ್ಯುತ್ತಿದ್ದ ಟ್ರ‍್ಯಾಕ್ಟರ್ ಟ್ರಾಲಿ (Tractor Trolley) ಉರುಳಿ ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ (Madhya Pradesh) ಖಾಂಡ್ವಾ (Khandwa) ಜಿಲ್ಲೆಯ ಪಂಧಾನ ಪ್ರದೇಶದಲ್ಲಿ ಗುರುವಾರ ನಡೆದಿದೆ.
ಮೃತರಲ್ಲಿ ಹೆಚ್ಚಿನವರು ಯುವತಿಯರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ದ್ಲಾ ಮತ್ತು ಜಮ್ಲಿ ಗ್ರಾಮಗಳಿಂದ ಸುಮಾರು 20-25 ಮಂದಿ ದುರ್ಗಾ ಭಕ್ತರು ದುರ್ಗಾ ದೇವಿಯ ಮೂರ್ತಿಯನ್ನು ವಿಸರ್ಜನೆಗಾಗಿ ಕೊಂಡೊಯ್ಯುತ್ತಿದ್ದರು. ಕೊಳದ ಹತ್ತಿರ ನಿಲ್ಲಿಸಿದ್ದ ಟ್ರ‍್ಯಾಕ್ಟರ್ ಸಮತೋಲನ ತಪ್ಪಿ ನೀರಿಗೆ ಬಿದ್ದ ಪರಿಣಾಮ ದುರಂತ ಸಂಭವಿಸಿದೆ. ಇದನ್ನೂ ಓದಿ: ಎನ್‌ಕೌಂಟರ್ ಭೀತಿ – ಏಕಕಾಲಕ್ಕೆ 103 ನಕ್ಸಲರ ಶರಣಾಗತಿ
ಅಪಘಾತದ ನಂತರ ಸ್ಥಳೀಯ ಪೊಲೀಸ್ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಹಲವರನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಾಲಿಯಲ್ಲಿ ಜನಸಂಖ್ಯೆ ಹೆಚ್ಚಾದ ಕಾರಣ ಸಮತೋಲನ ತಪ್ಪಿ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ | ಚಳ್ಳಕೆರೆಯಲ್ಲಿ ಮಳೆ ಇಲ್ಲದೆ ಒಣಗಿದ ಶೇಂಗಾ ಬೆಳೆ – ರೈತರು ಕಂಗಾಲು
ಇನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಚೆನ್ನೈ ಕಸ್ಟಮ್ಸ್ ಭಾರೀ ಲಂಚ- ಭಾರತದ ಕಾರ್ಯಾಚರಣೆ ನಿಲ್ಲಿಸುತ್ತೇವೆ ಎಂದ ಲಾಜಿಸ್ಟಿಕ್ಸ್ ಕಂಪನಿ