ಕಾಬೂಲ್: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‍ನ ಮಸೀದಿಯ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಬಾಂಬ್ ಸ್ಫೋಟದ ಬಗ್ಗೆ ಭದ್ರತಾ ಇಲಾಖೆ ಬಕ್ತಾರ ಖಾಲಿದ್ ಜದ್ರಾನ್ ಖಚಿತಪಡಿಸಿದ್ದಾರೆ.
Advertisement
Advertisement
ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆಯಿಂದ ಸಾಕಷ್ಟು ಸಾವು-ನೋವುಗಳು ಸಂಭವಿಸಿರುವ ಸಾಧ್ಯತೆಗಳಿವೆ ಎಂಬುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಜಗಳ – ಬೆಂಗ್ಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ
Advertisement
ಸದ್ಯ ಸ್ಥಳದಲ್ಲಿ ಭದ್ರತಾ ಪಡೆ ಬೀಡು ಬಿಟ್ಟಿವೆ. ಘಟನೆಯಲ್ಲಿ ಇಮಾಮ್ ಮೌಲಾವಿ ಅಮೀರ್ ಮೊಹಮ್ಮದ್ ಕಾವೂಲಿ ಕೂಡ ಸಾವನ್ನಪ್ಪಿದ್ದಾರೆ. ಕಾಬುಲ್ ಸೆಕ್ಯುರಿಟಿ ಕಾಂಡ್ ವಕ್ತಾರ ಘಟನೆ ಬಗ್ಗೆ ಪ್ರತಿಕ್ರಿಯಿಸಿ, ಘಟನಾ ಸ್ಥಳಕ್ಕೆ ರಕ್ಷಣಾ ಪಡೆಗಳು ದೌಡಾಯಿಸಿದ್ದು, ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ತಿಳಿಸಿದ್ದಾರೆ.
Advertisement
Live Tv