ಇಸ್ಲಾಮಾಬಾದ್: ಚಲಿಸುತ್ತಿದ್ದ ರೈಲಿಗೆ (Train) ಸ್ಫೋಟಕ ತುಂಬಿದ ಕಾರು ಡಿಕ್ಕಿಯಾದ ಪರಿಣಾಮ 24 ಮಂದಿ ಸಾವು, 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ (Pakistan) ಕ್ವೆಟ್ಟಾ (Quetta) ಪ್ರಾಂತ್ಯದಲ್ಲಿ ನಡೆದಿದೆ.
ಸ್ಫೋಟದ ಬಳಿಕ ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ (Baloch Liberation Army) ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ. ಪಾಕಿಸ್ತಾನ ಮಿಲಿಟರಿ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿ ಇದಾಗಿದೆ ಎಂದು ಬಲೂಚ್ ಲಿಬರೇಶನ್ ಆರ್ಮಿ ಹೇಳಿದೆ. ಸ್ಫೋಟದ ಬಳಿಕ ಸ್ಥಳದಲ್ಲಿ ಭಾರೀ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಾಂಬ್ ಸ್ಫೋಟದ ಪರಿಣಾಮ ರೈಲ್ವೆ ಟ್ರ್ಯಾಕ್ ಬಳಿಯ ಮನೆಗಳಲ್ಲಿ ಪಾರ್ಕ್ ಮಾಡಿದ್ದ ಹತ್ತಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಅಲ್ಲದೇ ಮನೆಗಳ ಕಿಟಕಿಗಳು ಪುಡಿಯಾಗಿದೆ. ಇದನ್ನೂ ಓದಿ: Falta Election Result| 30 ಸಾವಿರ ಮತಗಳ ಮುನ್ನಡೆಯಲ್ಲಿ ಬಿಜೆಪಿ, 4ನೇ ಸ್ಥಾನಕ್ಕೆ ಜಾರಿದ ಟಿಎಂಸಿ

ರೈಲು ಕಂಟೋನ್ಮೆಂಟ್‌ನಿಂದ ತೆರಳುತ್ತಿದ್ದ ವೇಳೆ ಬಲೂಚಿಸ್ತಾನ ಪ್ರದೇಶದ ಕ್ವೆಟ್ಟಾದ ಚೆಮನ್ ಫಾಟಕ್ (Chaman Phatak) ಬಳಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದೆ. ಬಾಂಬ್ ಸ್ಫೋಟದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿತಪ್ಪಿದ್ದು, ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ರೈಲ್ವೆ, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದ್ದು, ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದನ್ನೂ ಓದಿ: ವೃದ್ಧೆಗೆ ಡಿಜಿಟಲ್ ಅರೆಸ್ಟ್ – ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು
