ವಾಷಿಂಗ್ಟನ್: ಒಕ್ಲಹೋಮಾದ ತುಲ್ಸಾದಲ್ಲಿನ ಆಸ್ಪತ್ರೆಯ ಆವರಣದಲ್ಲಿ ದುಷ್ಕರ್ಮಿಯೋರ್ವ ಬಂದೂಕಿನಿಂದ ಗುಂಡು ಹಾರಿಸಿ ನಾಲ್ವರನ್ನು ಹತ್ಯೆಗೈದಿದ್ದಾನೆ.
ಸೇಂಟ್ ಫ್ರಾನ್ಸಿಸ್ ಹೆಲ್ತ್ ಸಿಸ್ಟಮ್ ಆಸ್ಪತ್ರೆಯ ಆವರಣದಲ್ಲಿ ನಡೆದ ದಾಳಿ ವೇಳೆ ರೈಫಲ್ ಮತ್ತು ಬಂದೂಕನ್ನು ಹೊಂದಿದ್ದ ಶಂಕಿತ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾನೆ. ಸದ್ಯ ಮೃತಪಟ್ಟ ನಾಲ್ವರ ಶವವನ್ನು ವಶಪಡಿಸಿಕೊಂಡಿದ್ದೇವೆ. ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಲಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ ಎಂದು ತುಲ್ಸಾ ಪೊಲೀಸ್ ಇಲಾಖೆಯ ಉಪ ಮುಖ್ಯಸ್ಥ ಎರಿಕ್ ಡಾಲ್ಗ್ಲೀಶ್ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಕೇಸ್ – 2 ಬಾರಿ ಅಬಾರ್ಷನ್ ಮಾಡಿಸಿದ್ದ ರೇಖಾ
ಸೇಂಟ್ ಫ್ರಾನ್ಸಿಸ್ ಆಸ್ಪತ್ರೆಯ ಎರಡನೇ ಮಹಡಿಗೆ ವ್ಯಕ್ತಿಯೋರ್ವ ಗನ್ ಹಿಡಿದುಕೊಂಡು ಬಂದಿದ್ದಾನೆ ಎಂಬ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಟ್ಟಡವನ್ನು ತೆರವುಗೊಳಿಸಲು ಪ್ರಯತ್ನಿಸಿದ್ದರು. ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಹಲವಾರು ಮಂದಿಗೆ ಗುಂಡು ಹಾರಿಸಿದ್ದಾನೆ. ಗುಂಡಿನ ದಾಳಿಯಿಂದ ನಾಲ್ವರು ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಂದ್ರಶೇಖರ ಕಂಬಾರರ ಹೆಸರಿನಲ್ಲಿ ವಂಚನೆಗೆ ಯತ್ನ: ದೂರು ದಾಖಲು