ವಾಷಿಂಗ್ಟನ್: ಉತ್ತರ ಮೆಕ್ಸಿಕೋದ (Northern Mexico) ಸಿಯುಡಾಡ್ ಜುವಾರೆಜ್‌ನಲ್ಲಿರುವ ಸರ್ಕಾರಿ ವಲಸಿಗರ ಕೇಂದ್ರದಲ್ಲಿ (Migration Facility Center) ಸೋಮವಾರ ರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ.
ಮೆಕ್ಸಿಕೋ ಮತ್ತು ಅಮೆರಿಕ (USA) ಸಂಪರ್ಕಿಸುವ ಸ್ಟಾಂಟನ್-ಲೆಡ್ರೆ ಸೇತುವೆಯ ಬಳಿ ಇರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಮೈಗ್ರೇಷನ್ ಕಚೇರಿಯಲ್ಲಿ (INM) ರಾತ್ರಿ 10 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ಘಟನೆಗೂ ಮುನ್ನ ನಗರದಿಂದ 71 ವಲಸಿಗರನ್ನು ಕೇಂದ್ರಕ್ಕೆ ಕರೆತರಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕದ ಶಾಲೆಯಲ್ಲಿ ಗುಂಡಿನ ದಾಳಿ – ಮೂವರು ಮಕ್ಕಳು ಸೇರಿ 6 ಜನ ಸಾವು
Advertisement
Advertisement
ಸದ್ಯ ಘಟನೆಯ ದೃಶ್ಯಾವಳಿಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಂಬುಲೆನ್ಸ್ ಹಾಗೂ ತುರ್ತು ಸೇವೆಗಳ ಸೌಲಭ್ಯ ಕಲ್ಪಿಸಲಾಗಿದ್ದು, ಗಾಯಗೊಂಡವರನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ – 20 ಹಜ್ ಯಾತ್ರಾರ್ಥಿಗಳ ಸಾವು
Advertisement
Advertisement
ಮೂಲಗಳ ಪ್ರಕಾರ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಮೈಗ್ರೇಷನ್ ಕಚೇರಿ ಸಿಬ್ಬಂದಿ ನಗರದಲ್ಲಿದ್ದ ವಲಸಿಗರನ್ನು ಕೇಂದ್ರಕ್ಕೆ ತರುವ ಕಾರ್ಯಾಚರಣೆ ಕೈಗೊಂಡಿದ್ದರು. ಈ ವಿಚಾರದಲ್ಲಿ ವಲಸಿಗರು ಮತ್ತು ಸಿಬ್ಬಂದಿ ನಡುವೆ ಉದ್ವಿಗ್ನತೆ ಉಂಟಾಗಿತ್ತು ಎಂದು ತಿಳಿದುಬಂದಿದೆ. ಘಟನೆಯ ನಂತರ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.