ಜಕಾರ್ತ್: ಇಂಡೋನೆಷ್ಯಾದ (Indonesia) ಜಾವಾದಲ್ಲಿ ನಡೆದ 5.6 ತೀವ್ರತೆಯ ಭೂಕಂಪಕ್ಕೆ (Earthquake) 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಸ್ಥಳೀಯ ಆಡಳಿತದ ಹಿರಿಯ ಅಧಿಕಾರಿ ನೀಡಿರುವ ಮಾಹಿತಿ ಪ್ರಕಾರ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೂಕಂಪಕ್ಕೆ ಹಲವು ಕಟ್ಟಡಗಳು ನೆಲಸಮವಾಗಿದ್ದು, 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈಗಾಗಲೇ 300ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿರುವುದಾಗಿ ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್- ಜಾಗತಿಕ ಉಗ್ರ ಸಂಘಟನೆಯಿಂದ ಪ್ರಭಾವಿತನಾಗಿದ್ದ ಶಾರೀಕ್: ಅಲೋಕ್‌ಕುಮಾರ್
ಜರ್ಕಾತ್‍ನ (Jakarta) ದಕ್ಷಿಣಆಗ್ನೇಯ ಭಾಗದ 75 ಕಿ.ಮೀ ವರೆಗೆ ಭೂಕಂಪ ಸಂಭವಿಸಿದ್ದು, ಆರಂಭದ 10 ಕಿ.ಮೀ ವ್ಯಾಪ್ತಿಯಲ್ಲಿ ಹೆಚ್ಚಿನ ಸಾವು ಸಂಭವಿಸಿದೆ. ನೂರಾರು ಮನೆ, ಶಾಲೆಗಳಿಗೆ ಹಾನಿಯಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಶ್ರದ್ಧಾ ವಾಕರ್ ಹತ್ಯೆ ಕೇಸ್ – CBIಗೆ ವರ್ಗಾಯಿಸುವಂತೆ ದೆಹಲಿ ಹೈಕೋರ್ಟ್‌ಗೆ ಅರ್ಜಿ
https://twitter.com/gchahal/status/1594611651046952960
ಭೂಕಂಪ ಸಂಭವಿಸಿ 2 ಗಂಟೆಗಳ ಕಾಲ ಜನ ಭಯಭೀತರಾಗಿ ಇದ್ದ ಜಾಗದಲ್ಲೇ ಕೂತಿದ್ದಾರೆ. ಭೂಕಂಪದ ಭಯಾನಕ ದೃಶ್ಯ ಸ್ಥಳೀಯ ಸಿಸಿಟಿವಿಗಳಲ್ಲಿ ಸೆರೆಯಾಗಿದೆ.