ಟರ್ಕಿ ರೆಸಾರ್ಟ್‌ನಲ್ಲಿ ಅಗ್ನಿ ದುರಂತ – ಸಾವಿನ ಸಂಖ್ಯೆ 76ಕ್ಕೆ ಏರಿಕೆ

Public TV
1 Min Read
Ski Resort Turkey

ಇಸ್ತಾಂಬುಲ್:‌ ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ (Turkey Ski Resort) ಹೋಟೆಲ್‌ನಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ದುರಂತರದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. 51 ಮಂದಿ ಗಾಯಗೊಂಡಿದ್ದಾರೆ.

ಶಾಲೆ ಸೆಮಿಸ್ಟರ್‌ ಹಾಲಿಡೇಸ್‌ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದಾಗಲೇ ಈ ಘಟನೆ ನಡೆದಿದೆ. 12 ಅಂತಸ್ತಿನ ಹೋಟೆನಲ್ಲಿ 234 ಅತಿಥಿಗಳಿಗೆ ಆತಿಥ್ಯ ವಹಿಸಲಾಗಿತ್ತು. ಸದ್ಯ ತನಿಖೆ ಆರಂಭಿಸಿರುವ ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಅಗ್ನಿ ಅವಘಡಕ್ಕೆ ನಿಖರ ಕಾರಣ ಏನೇಂಬುದನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೇ 76 ಶವಗಳನ್ನು ಹೊರತೆಗೆಯಲಾಗಿದ್ದು, 45 ಶವಗಳನ್ನು ಮಾತ್ರ ಗುರುತಿಸಲಾಗಿದೆ. ಉಳಿದ ಶವಗಳ ಗುರುತು ಪತ್ತೆ ಮಾಡುವ ಕೆಲಸವನ್ನೂ ಅಧಿಕಾರಿಗಳು ಮಾಡುತ್ತಿದ್ದಾರೆ.

Turkey Ski Resort fire

ರಾಜಧಾನಿ ಅಂಕಾರಾದ ವಾಯುವ್ಯಕ್ಕೆ 170 ಕಿಲೋಮೀಟರ್ (100 ಮೈಲುಗಳು) ದೂರದಲ್ಲಿರುವ ಕರ್ತಲ್ಕಯಾ ರೆಸಾರ್ಟ್‌ಗೆ ಹಲವಾರು ಸಚಿವರು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆಗೆ ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬ್ರಹ್ಮಪುತ್ರದ ನದಿಗೆ ಬೃಹತ್ ಡ್ಯಾಮ್‌ ಕಟ್ಟಲು ಮುಂದಾದ ಚೀನಾ – ಭಾರತದ ಆತಂಕವೇನು?

Turkey Ski Resort

ಮರದಿಂದಲೇ ಮಾಡಲಾಗಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‌ನಲ್ಲಿ ಬೆಳಗಿನ ಜಾವ 3:27ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಕಿ ಅವಘಡದಿಂದ ಪಾರಾಗಲು ಅನೇಕರು ಹೋಟೆಲ್‌ನ ಕಿಟಕಿಯಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಟ್ರಂಪ್‌ ಆಡಳಿತದ ಮೊದಲ ಕ್ವಾಡ್‌ ಸಭೆಯಲ್ಲಿ ಸಚಿವ ಎಸ್.‌ ಜೈಶಂಕರ್‌ ಭಾಗಿ

Share This Article