ಶ್ರೀನಗರ: ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಅಮರನಾಥದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ.
Cloud burst at Holy Cave Update: Six more deaths reported (Total 08 deaths so far). Injured persons airlifted for treatment. Rescue operation still going on.@JmuKmrPolice https://t.co/gvuhypNVrW
— Kashmir Zone Police (@KashmirPolice) July 8, 2022
Advertisement
ಇಂದು ಸಂಜೆ 5.30ರ ವೇಳೆಯಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ NDRF, SDRF ಹಾಗೂ BSF ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಎರಡೇ ದಿನ: ಯಾತ್ರಾರ್ಥಿಗಳಿಗೆ ಆಧಾರ್, ಸರ್ಕಾರಿ ಗುರುತಿನ ಚೀಟಿ ಕಡ್ಡಾಯ
Advertisement
Advertisement
ಘಟನಾ ಪ್ರದೇಶಕ್ಕೆ NDRF, SDRF, BSF ಮತ್ತು ಸ್ಥಳೀಯ ರಕ್ಷಣಾಪಡೆಗಳು ಭೇಟಿ ನೀಡಿದ್ದು, ಘಟನಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ. ಜನರ ಜೀವ ಉಳಿಸುವುದು ನಮ್ಮ ಆದ್ಯತೆ ಎಂದು ಶಾ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ `ಕಾಳಿ’ ಹಿಂದುತ್ವವನ್ನು ಕಿತ್ತೊಗೆಯುತ್ತಾಳೆ: ಲೀನಾ ಮಣಿಮೇಕಲೈ ಸ್ಫೋಟಕ ಹೇಳಿಕೆ
Advertisement
2 ವರ್ಷಗಳ ಬಳಿಕ ಅಮರನಾಥ ಯಾತ್ರೆ: ಸತತ 2 ವರ್ಷಗಳ ನಂತರ ಅಮರನಾಥ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಸುಮಾರು 2,750 ಯಾತ್ರಿಕರ ಬ್ಯಾಚ್ ಇಂದು ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಾವಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗವನ್ನು ಹೊಂದಿರುವ ಗುಹಾ ದೇಗುಲ ಜಗತ್‍ಪ್ರಸಿದ್ಧವಾಗಿದೆ. ಅನಂತನಾಗ್ ಜಿಲ್ಲೆಯ ಪಹಲ್ಗಾಮ್‍ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್‍ನಲ್ಲಿ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲಾ ಅವರು ಯಾತ್ರೆಗೆ ಚಾಲನೆ ನೀಡಿದ್ದರು. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಬೇಸ್ ಕ್ಯಾಂಪ್‍ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್‍ಗೆ ಚಾಲನೆ ನೀಡಿದ್ದರು.