ಮಿರ್ಜಾಪುರ: ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಸುಮಾರು 90 ಶಾಲಾ ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ನಡೆದಿದೆ.
ಮಧ್ಯಾಹ್ನದ ಊಟ ಮಾಡಿದ ಬಳಿಕ ಮಕ್ಕಳಿಗೆ ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ವಿದ್ಯಾಚಲ್ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
Advertisement
ಸುಮಾರು 40 ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೇರೆ ಆಸ್ಪತ್ರೆಗೆ ರವಾನಿಸಿದ್ದೇವೆ. ಕೆಲವು ಮಕ್ಕಳು ಹೊಟ್ಟೆ ನೋವು ಹಾಗೂ ವಾಂತಿಯಾಗುತ್ತಿರುವುದನ್ನು ನಮಗೆ ತಿಳಿಸಿದರು. ನಂತರ ನಾವು ಊಟವನ್ನು ಪರೀಕ್ಷಿಸಿದಾಗ ಅದರಲ್ಲಿ ಹಲ್ಲಿಯ ಬಾಲ ಕಾಣಿಸಿಕೊಂಡಿದೆ ಎಂದು ಶಾಲೆಯ ಪ್ರಿನ್ಸಿಪಾಲ್ ಜೈ ಸಿಂಗ್ ತಿಳಿಸಿದ್ದಾರೆ.
Advertisement
ಈ ಶಾಲೆ ವಿದ್ಯಾಚಲ್‍ನ ಪರ್ಷಿಯಾ ಧುವಾ ಗ್ರಾಮದಲ್ಲಿದೆ. ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ವರದಿಯಾಗಿದೆ.
Advertisement
#UttarPradesh: At least 90 students of a school in Mirzapur fall sick after consuming contaminated food, hospitalized for treatment. pic.twitter.com/Y6Lq5zG7Cr
— ANI UP/Uttarakhand (@ANINewsUP) October 13, 2017