ಆಂಸ್ಟಡ್ರ್ಯಾಮ್: ಕಳೆದ ಕೆಲ ದಿನಗಳ ಹಿಂದೆಯಷ್ಟೇ ನ್ಯೂಜಿಲೆಂಡ್‍ನ ಮಸೀದಿಯಲ್ಲಿ ನಡೆದ ದಾಳಿಯ ಬೆನ್ನಲ್ಲೇ ನೆದರ್ ಲ್ಯಾಂಡ್‍ನ ಉಟ್ರೆಶ್ ಎಂಬ ನಗರದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ.
ಬಂದೂಕುದಾರಿ ವ್ಯಕ್ತಿ ಟ್ರಾಮ್ ರೈಲಿನ ಒಳಗಡೆ ದಾಳಿ ನಡೆಸಿದ್ದು, ಈ ಕೃತ್ಯದ ಹಿಂದೆ ಭಯೋತ್ಪಾದಕರ ಪ್ರೇರಣೆ ಇರುವ ಅನುಮಾನ ವ್ಯಕ್ತವಾಗಿದೆ. ಆದರೆ ಘಟನೆಗೆ ಖಚಿತ ಕಾರಣ ಏನು ಎನ್ನುವುದು ಸ್ಪಷ್ಟವಾಗಿಲ್ಲ.
Advertisement
https://twitter.com/PolitieUtrecht/status/1107636046685188096
Advertisement
ಸಾರ್ವಜನಿಕರ ಮೇಲೆ ದಾಳಿ ನಡೆಸಿದ ಶೂಟರ್ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಓರ್ವನಿಗಿಂತ ಹೆಚ್ಚಿನ ಸಂಖ್ಯೆಯ ಬಂದೂಕುದಾರಿಗಳು ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸ್ ಅನುಮಾನ ವ್ಯಕ್ತಪಡಿಸಿದ್ದಾರೆ. ಉಟ್ರೆಶ್ ನಗರದಲ್ಲಿ ನಾಗರಿಕರಿಗೆ ಮನೆಯಿಂದ ಹೊರ ಬರದಂತೆ ಸೂಚನೆ ನೀಡಲಾಗಿದ್ದು, ಸಾರಿಗೆ ವ್ಯವಸ್ಥೆಯನ್ನು ನಿಲ್ಲಿಸಲಾಗಿದೆ. ಘಟನೆ ನಡೆದ ಪ್ರದೇಶ ಸೇರಿದಂತೆ ಎಲ್ಲೆಡೆ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.
Advertisement
ಘಟನೆಯಲ್ಲಿ ಗಾಯಗೊಂಡವರ ರಕ್ಷಣಾ ಕಾರ್ಯವೂ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಸೇರಿದಂತೆ, ಹೆಲಿಕಾಪ್ಟರ್ ಅಂಬುಲೆನ್ಸ್ ನಿಂದ ರಕ್ಷಣಾ ಕಾರ್ಯ ನಡೆಸಲಾಗಿದೆ. ನೆದರ್ ಲ್ಯಾಂಡ್ ಪ್ರಧಾನಿ ಮಾರ್ಕ್ ರುಟ್ಟೆ, ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಗೆ ಸಂತಾಪ ಸೂಚಿಸಿದ್ದು, ಸರ್ಕಾರ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾಗಿ ತಿಳಿಸಿದ್ದಾರೆ.
Advertisement
A shooting in the Netherlands has left several injured. https://t.co/WDbbchcwzH
— Twitter Moments (@TwitterMoments) March 18, 2019
https://twitter.com/NBbreaking/status/1107621773946863617