ಕೋಲ್ಕತ್ತಾ: ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ (West Bengal) ದತ್ತಪುಕೂರ್‌ನ ನಡೆದಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅಲ್ಲದೇ ಸ್ಫೋಟದ ತೀವ್ರತೆಗೆ ಈ ಪ್ರದೇಶದಲ್ಲಿನ ಹಲವಾರು ಕಟ್ಟಡಗಳಿಗೆ ಹಾನಿಯಾಗಿದೆ. ಎರಡು ಅಂತಸ್ತಿನ ಮನೆಯೊಳಗೆ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸಲಾಗುತ್ತಿತ್ತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕುಕ್ಕರ್‌ನಿಂದ ಹೊಡೆದು ಪ್ರಿಯತಮೆಯ ಕೊಲೆಗೈದ ಪ್ರಿಯಕರ
Advertisement
Advertisement
ಇದೇ ವರ್ಷ ಮೇ ತಿಂಗಳಲ್ಲಿ ಮಿಡ್ನಾಪುರ ಜಿಲ್ಲೆಯ ಎಗ್ರಾ ಎಂಬಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದರು. ಅಲ್ಲದೇ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಮತ್ತೊಂದು ಪ್ರಕರಣದಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದರು.
Advertisement
Advertisement
ಹಲವಾರು ಸ್ಫೋಟಗಳ ಬಳಿಕ ರಾಜ್ಯ ಸರ್ಕಾರವು ಹೊಸ ನೀತಿಯನ್ನು ಘೋಷಿಸಿತ್ತು. ಇದರ ಅಡಿಯಲ್ಲಿ ಕೈಗಾರಿಕಾ ಕೇಂದ್ರಗಳಲ್ಲಿ ಮಾತ್ರ ಪಟಾಕಿಗಳನ್ನು ತಯಾರಿಸಲು ಸೂಚಿಸಲಾಗಿತ್ತು. ಅಲ್ಲದೇ ಅಕ್ರಮ ಪಟಾಕಿ ತಯಾರಿಕಾ ಘಟಕಗಳ ಪತ್ತೆಗೆ ಅಧಿಕಾರಿಗಳ ತಂಡವನ್ನು ರಚಿಸಲಾಗಿತ್ತು. ಇದನ್ನೂ ಓದಿ: ತಾಳಿ ಕಟ್ಟೋ ವೇಳೆ ಹಸೆಮಣೆಯಿಂದ ಎದ್ದ ವಧು – ಮುರಿದು ಬಿತ್ತು ಮದುವೆ
Web Stories