-ನಾನು ಹಿಂದೂ, ಹಿಂದುತ್ವವಾದಿ ಅಲ್ಲ
ಜೈಪುರ: ಹಿಂದುತ್ವವಾದಿಗಳು ಅಧಿಕಾರಕ್ಕಾಗಿ ಯಾರನ್ನು ಬೇಕಾದ್ರೂ ಕೊಲ್ತಾರೆ, ಏನ್ ಬೇಕಾದ್ರೂ ಮಾಡ್ತಾರೆ ಎಂದು ರಾಜಸ್ಥಾನದ ಜೈಪುರದಲ್ಲಿ ಬೆಲೆ ಏರಿಕೆ ವಿರುದ್ಧ ನಡೆಯುತ್ತಿರುವ ರ್‍ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
Advertisement
Advertisement
ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಎರಡು ಪದಗಳಾದ ಹಿಂದೂ ಮತ್ತು ಹಿಂದುತ್ವದ ಬಗ್ಗೆ ಘರ್ಷಣೆ ನಡೆಯುತ್ತಿದೆ. ಇದು ಒಂದು ಪದವಲ್ಲ. ಈ ಎರಡೂ ಪದಗಳಿಗೂ ಬೇರೆ ಬೇರೆ ಅರ್ಥವಿದೆ. ನಾನು ಹಿಂದೂ ಆದರೆ ಹಿಂದುತ್ವವಾದಿ ಅಲ್ಲ. ಹಿಂದೂ ಸತ್ಯವನ್ನು ಹುಡುಕುವ ಕೆಲಸ ಮಾಡುತ್ತದೆ. ಹಿಂದುತ್ವವಾದಿ ಅಧಿಕಾರವನ್ನು ಹುಡುಕುವ ಕಾರ್ಯವನ್ನು ಮಾಡುತ್ತದೆ. ಹಾಗಾಗಿ ನಾನೂ ಹಿಂದೂ ಎಂದಿದ್ದಾರೆ. ಇದನ್ನೂ ಓದಿ: ಯೋಗಿ ಸರ್ಕಾರದಿಂದ ಇಲ್ಲಿಯವರೆಗೆ 15246 ಕಿ.ಮೀ.ಗೂ ಹೆಚ್ಚು ಗ್ರಾಮೀಣ ರಸ್ತೆಗಳನ್ನು ನಿರ್ಮಾಣ
Advertisement
#WATCH | "Who is Hindu? The one who embraces everybody, fears nobody, and respects every religion," says Congress leader Rahul Gandhi at the party's rally against inflation in Jaipur, Rajasthan pic.twitter.com/OnKjsQOoRJ
— ANI (@ANI) December 12, 2021
Advertisement
ಪ್ರಿಯಾಂಕಾ ಗಾಂಧಿ ಮಾತನಾಡಿ, ಕಾಂಗ್ರೆಸ್ 70 ವರ್ಷಗಳಲ್ಲಿ ಏನು ಮಾಡಿದೆ ಎಂದು ಪ್ರಶ್ನಿಸುವವರು. ಇದೀಗ ನೀವು 7 ವರ್ಷಗಳಲ್ಲಿ ಏನು ಮಾಡಿದ್ದೀರಿ? ನೀವು ಮಾಡಿದ್ದು ಬರೀ ನಾವು ನಿರ್ಮಿಸಿದ ವಿಮಾನ ನಿಲ್ದಾಣ ಹಾಗೂ ಮಹತ್ವದ ಸರ್ಕಾರದ ಸ್ವತ್ತನ್ನು ಮಾರಾಟ ಮಾಡಿದ್ದೀರಿ. ಬಿಜೆಪಿ ಸರ್ಕಾರ ಕಾಂಗ್ರೆಸ್ 70 ವರ್ಷಗಳಲ್ಲಿ ಸೃಷ್ಟಿಸಿದ ಸಂಪತ್ತನ್ನು ಮಾರಾಟ ಮಾಡುತ್ತಿದೆ. ಬಿಜೆಪಿ ಸರ್ಕಾರ ಬಡವರ ಹೊಟ್ಟೆಗೆ ಬಡಿಯುತ್ತಿದೆ. ಗ್ಯಾಸ್ ಸಿಲಿಂಡರ್ ದರ 1,000 ರೂ., ಎಣ್ಣೆ ಬೆಲೆ 200, ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೇರಿದೆ ಇದು ಬಿಜೆಪಿಯ ಅಭಿವೃದ್ಧಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಯುವಕನ ಜೊತೆಗೆ ವಾಸವಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ರ್‍ಯಾಲಿಯಲ್ಲಿ ಸೋನಿಯಾ ಗಾಂಧಿ, ಅಶೋಕ್ ಗೆಹ್ಲೋಟ್, ಮಲ್ಲಿಕಾರ್ಜುನ ಖರ್ಗೆ, ಅದಿರ್ ರಂಜನ್ ಚೌಧರಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.