ಅಜಾತಶತ್ರು ಅಟಲ್ ಜೀಗೆ ಸಿಂಧಗಿಯಲ್ಲಿ ಅಪಮಾನ: ಕಾಲೇಜು ವಿರುದ್ಧ ಸ್ಥಳೀಯರ ಕಿಡಿ

Public TV
1 Min Read
BIJ CLG

ವಿಜಯಪುರ: ಅಜಾತಶತ್ರು, ಭಾರತ ರತ್ನ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಿದ್ದರು ಜಿಲ್ಲೆಯಲ್ಲಿ ಕಾಲೇಜ್ ತೆರೆದಿದ್ದು, ಇದರಿಂದ ವಾಜಪೇಯಿಗೆ ಅಪಮಾನ ಮಾಡಲಾಗಿದೆ ಎಂದು ಸಿಂಧಗಿ ಜನತೆ ಆರೋಪಿಸಿದ್ದಾರೆ.

ವಾಜಪೇಯಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ ಕಾಲೇಜಗಳಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಜಿಲ್ಲೆಯ ಸಿಂಧಗಿಯ ಪಿ.ಇ.ಎಸ್ ಕಾಲೇಜ್ ಇಂದು ಎಂದಿನಂತೆ ನಡೆಯುತ್ತಿತ್ತು. ಇದನ್ನು ಕಂಡ ಸ್ಥಳೀಯರು ಕಾಲೇಜಿಗೆ ತೆರಳಿ ರಜೆ ಫೋಷಣೆಯಾಗಿದ್ದರೂ ಯಾಕೆ ರಜೆ ನೀಡಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಆಗ ಕಾಲೇಜು ಸಿಬ್ಬಂದಿ ಸ್ಥಳೀಯರ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಆಗ ಸ್ಥಳೀಯರು ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಕಾಲೇಜಿಗೆ ಬಂದಾಗ ಮಾಧ್ಯಮದವರ ಮೇಲು ಕಾಲೇಜಿನ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ. ಇದರಿಂದ ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ನಂತರ ಸ್ಥಳೀಯರ ಒತ್ತಾಯಕ್ಕೆ ಮಣಿದು ಕಾಲೇಜು ಆಡಳಿತ ಮಂಡಳಿ ರಜೆ ಘೋಷಿಸಿದೆ.

ATAL BIHARI VAJPAYE

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ವಿಧಿವಶರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿ ಕೆಲ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ.

ಕೆಲ ತಿಂಗಳ ಹಿಂದೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಬಳಿಕ ಡಿಸ್ಚಾರ್ಜ್ ಆಗಿದ್ದರು. ಆದರೆ ನಂತರ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಟ್ಟಿನಲ್ಲಿ 9 ವಾರ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅಟಲ್ ಜಿ ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *