ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಅವರ ಆರೋಗ್ಯದಲ್ಲಿ ಯಾವ ರೀತಿಯೂ ಸುಧಾರಣೆಯಾಗಿಲ್ಲ ಎಂದು ಏಮ್ಸ್ ವೈದ್ಯರಿಂದ ಮಾಹಿತಿ ಲಭ್ಯವಾಗಿದೆ.
ಬುಧವಾರ ಅಟಲ್ ಬಿಹಾರಿ ವಾಜಪೇಯಿ ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಬುಧವಾರ ಯಾವ ಪರಿಸ್ಥಿತಿಯಲ್ಲಿದ್ದರೋ ಅದೇ ಪರಿಸ್ಥಿತಿಯಲ್ಲಿ ಇಂದು ಕೂಡ ಇದ್ದಾರೆ ಎಂದು ದೆಹಲಿಯ ಏಮ್ಸ್ ವೈದ್ಯರಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದೆ.
Advertisement
Advertisement
ವಾಜಪೇಯಿ ಆರೋಗ್ಯ ಚೇತರಿಗೆ ದೇಶದಾದ್ಯಂತ ಪೂಜೆ ನಡೆಯುತ್ತಿವೆ. ಈಗಾಗಲೇ ಬಿಜೆಪಿ ಶಾಸಕರು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ. ಆಸ್ಪತ್ರೆಗೆ ಎಲ್ ಕೆ ಅಡ್ವಾಣಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಮಿತ್ ಶಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಲ್ಲಿ ವಾಜಪೇಯಿ ಕುಟುಂಬಸ್ಥರು ಈಗಾಗಲೇ ಜಮಾಯಿಸಿದ್ದು, ಕಣ್ಣೀರು ಹಾಕುತ್ತಿದ್ದಾರೆ.
Advertisement
ಆಸ್ಪತ್ರೆ ಬಳಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗಿದೆ. ಆರೋಗ್ಯ ಸಚಿವ ಜೆ.ಪಿ ನಡ್ವಾ ಭೇಟಿ ನಿಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ರಾಜ್ಯ ಪ್ರವಾಸದಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಸವನ್ನು ಕೂಡ ರದ್ದು ಮಾಡಿದ್ದಾರೆ.
Advertisement
ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು. ವಾಜಪೇಯಿ ಆರೋಗ್ಯ ಇನ್ನಷ್ಟು ಕ್ಷೀಣಿಸಿದ್ದು, ಆಮ್ಲಜನಕದ ಬೆಂಬಲ ನೀಡಲಾಗುತ್ತಿದೆ ಎಂದು ಬುಧವಾರ ಏಮ್ಸ್ ಆಸ್ಪತ್ರೆ ತಿಳಿಸಿತ್ತು.
Former Prime Minister Atal Bihari Vajpayee's condition continues to remain the same. He is critical and on life support systems: AIIMS statement pic.twitter.com/OJKHHcTDSn
— ANI (@ANI) August 16, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv