LatestMain PostNational

ಮಾಜಿ ಪ್ರಧಾನಿ ವಾಜಪೇಯಿ ಹುಟ್ಟುಹಬ್ಬ: ಗಣ್ಯರಿಂದ ಗೌರವ ನಮನ

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 97ನೇ ಜನ್ಮ ದಿನಾಚರಣೆ. ಈ ಹಿನ್ನೆಲೆಯಲ್ಲಿ ವಾಜಪೇಯಿ ಸಮಾಧಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪುಷ್ಪನಮನ ಸಲ್ಲಿಸಿದ್ದಾರೆ.

ದೆಹಲಿಯ ರಾಜ್‍ಘಾಟ್‍ನಲ್ಲಿ ಸದೈವ ಅಟಲ್ ಸ್ಮಾರಕದಲ್ಲಿ ರಾಷ್ಟ್ರ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ಗೌರವಾನ್ವಿತ ಅಟಲ್ ಜಿ ಅವರ ಜನ್ಮದಿನದಂದು ಅವರಿಗೆ ನಮನಗಳು. ಅಟಲ್ ಜಿ ಅವರ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇವೆ. ದೇಶಕ್ಕೆ ಅವರ ಶ್ರೀಮಂತ ಸೇವೆಯಿಂದ ನಾವು ಸ್ಫೂರ್ತಿ ಪಡೆದಿದ್ದೇವೆ. ಭಾರತವನ್ನು ಬಲಿಷ್ಠ ಹಾಗೂ ಅಭಿವೃದ್ಧಿಗೊಳಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಅಭಿವೃದ್ಧಿ ಉಪಕ್ರಮಗಳು ಲಕ್ಷಾಂತರ ಭಾರತೀಯರ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್ ಜಲಾಶಯ ಸತತ 53 ದಿನಗಳವರೆಗೆ ಸಂಪೂರ್ಣ ಭರ್ತಿ – 90 ವರ್ಷಗಳ ಇತಿಹಾಸದಲ್ಲೇ ದಾಖಲೆ

ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ, ಅಟಲ್ ಜಿ ಅವರು ತಮ್ಮ ಅಚಲವಾದ ತತ್ವಗಳು ಮತ್ತು ಅದ್ಭುತ ಭಕ್ತಿಯಿಂದ ದೇಶದಲ್ಲಿ ಅಂತ್ಯೋದಯ ಮತ್ತು ಉತ್ತಮ ಆಡಳಿತದ ದೃಷ್ಟಿಕೋನವನ್ನು ಸಾಕಾರಗೊಳಿಸುವ ಮೂಲಕ ಭಾರತೀಯ ರಾಜಕೀಯಕ್ಕೆ ಹೊಸ ದಿಕ್ಕನ್ನು ನೀಡಿದರು. ಇಂತಹ ಅದ್ವಿತೀಯ ದೇಶಭಕ್ತ ಗೌರವಾನ್ವಿತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ನಮನಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕ್ರಿಸ್‌ಮಸ್‌ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್‌ ಕಲಾಕೃತಿ

Leave a Reply

Your email address will not be published.

Back to top button