ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ (AAP) ಅತಿಶಿ ಸಿಂಗ್ ಮರ್ಲೆನಾ (Atishi Singh Marlena) ಪ್ರಮಾಣವಚನ ಸ್ವೀಕರಿಸಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಅತಿಶಿ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅತಿಶಿಯವರೊಂದಿಗೆ ಆಮ್ ಆದ್ಮಿ ಪಕ್ಷದ ಐವರು ಶಾಸಕರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೊದಲು ಸೆ.26-27ರ ಅಧಿವೇಶನದ ವೇಳೆ ಪ್ರಮಾಣವಚನ ಸ್ವೀಕರಿಸಲು ಚಿಂತಿಸಲಾಗಿತ್ತು. ಇದನ್ನೂ ಓದಿ: Jammu Kashmir Election| ಈದ್, ಮೊಹರಂ ಹಬ್ಬಕ್ಕೆ 2 ಸಿಲಿಂಡರ್ ಫ್ರೀ : ಶಾ ಘೋಷಣೆ
Advertisement
Advertisement
ಬಿಜೆಪಿಯ ಸುಷ್ಮಾ ಸ್ವರಾಜ್, ಕಾಂಗ್ರೆಸ್‌ನ ಶೈಲಾ ದೀಕ್ಷಿತ್ ಬಳಿಕ ಎಎಪಿಯ ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿ ಹಾಗೂ ದೆಹಲಿಯ ಅತಿ ಕಿರಿಯ ಮುಖ್ಯಮಂತ್ರಿಯಾಗಿ ಹುದ್ದೆ ಅಲಂಕರಿಸಿದ್ದಾರೆ. 2020ರಲ್ಲಿ ಅತಿಶಿ ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಕಲ್ಕಾಜಿಯಿಂದ ಗೆದ್ದಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ – 20ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಎಸ್ಕೇಪ್
Advertisement
Advertisement
ಎಎಪಿ ಆರಂಭದಲ್ಲಿ ಅತಿಶಿ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕೆಂದು ಯೋಜಿಸಿತ್ತು. ಇಂದು ಅತಿಶಿ ಮಂತ್ರಿಮಂಡಲದೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಂದಿನ ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಸಚಿವರಾಗಿದ್ದ ಎಎಪಿ ನಾಯಕರಾದ ಗೋಪಾಲ್ ರಾಯ್, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೇನ್ ಅವರು ಸಚಿವರಾಗಿ ಮುಂದುವರೆಯಲಿದ್ದು, ಪಕ್ಷದ ಇಬ್ಬರು ಶಾಸಕರನ್ನು ಸಹ ಹೊಸ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲಾಗಿದೆ. ಶಾಸಕ ಮುಖೇಶ್ ಅಹ್ಲಾವತ್ ಅವರು ಹೊಸದಾಗಿ ಅತಿಶಿ ಅವರ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಮುನಿರತ್ನ ಕೇಸ್‌ನ ಎಸ್‌ಐಟಿ ರಚನೆ ಬಗ್ಗೆ ನನಗೆ ಮಾಹಿತಿ ಇಲ್ಲ: ಡಿಕೆಶಿ