– ಅಧಿವೇಶನದಲ್ಲಿ ಮಹಿಳಾ ಸಿಎಂ vs ಮಹಿಳಾ ವಿಪಕ್ಷ ನಾಯಕಿ
ನವದೆಹಲಿ: ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯಾಗಿ ದೆಹಲಿ ಮಾಜಿ ಸಿಎಂ ಅತಿಶಿ ಅವರನ್ನು ಆಯ್ಕೆ ಮಾಡಲಾಗಿದೆ.
Advertisement
ಈ ಹುದ್ದೆಗೆ ಮಹಿಳೆಯೊಬ್ಬರು ಆಯ್ಕೆಯಾಗಿರುವುದು ಇದೇ ಮೊದಲು. ಅಷ್ಟೇ ಅಲ್ಲ, ಮುಂಬರುವ ವಿಧಾನಸಭಾ ಅಧಿವೇಶನದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ವಿರೋಧ ಪಕ್ಷದ ನಾಯಕಿಯೊಬ್ಬರು ದೆಹಲಿ ಮುಖ್ಯಮಂತ್ರಿಯನ್ನು ಎದುರಿಸಲಿದ್ದಾರೆ.
Advertisement
ಭಾನುವಾರ ನಡೆದ ಎಎಪಿ ಶಾಸಕಾಂಗ ಸಭೆಯಲ್ಲಿ ಅತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಯಿತು. ಶಾಸಕ ಸಂಜೀವ್ ಝಾ ಅವರು ಪ್ರಮುಖ ಹುದ್ದೆಗೆ ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದರು.
Advertisement
ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಶಾಸಕಾಂಗ ಪಕ್ಷಕ್ಕೆ ಧನ್ಯವಾದಗಳು. ಬಲವಾದ ವಿರೋಧ ಪಕ್ಷವು ಜನರ ಪರವಾಗಿ ಧ್ವನಿಯನ್ನು ಎತ್ತುತ್ತದೆ. ಬಿಜೆಪಿ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷ ನೋಡಿಕೊಳ್ಳುತ್ತದೆ ಎಂದು ಅತಿಶಿ ತಿಳಿಸಿದ್ದಾರೆ.
Advertisement
ದೆಹಲಿ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಮೂರು ದಿನಗಳ ಈ ಅಧಿವೇಶನದಲ್ಲಿ ಹಿಂದಿನ ಎಎಪಿ ಸರ್ಕಾರದ ಕಾರ್ಯಕ್ಷಮತೆಯ ವಿರುದ್ಧ ಬಾಕಿ ಇರುವ ಸಿಎಜಿ ವರದಿಗಳನ್ನು ಸದನದಲ್ಲಿ ಮಂಡಿಸಲಾಗುವುದು ಎಂದು ಆಡಳಿತಾರೂಢ ಬಿಜೆಪಿ ಸರ್ಕಾರ ಹೇಳಿದೆ.