ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ (Munirathna) ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.
Advertisement
ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಕೋಲಾರದ (Kolar) ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ ಸಂಜೆ ಶಾಸಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧಿಸಿ ಶನಿವಾರ ಸಂಜೆ ವೇಳೆಗೆ ಬೆಂಗಳೂರಿಗೆ ಕರೆತಂದಿದ್ದರು. ಅಶೋಕ ನಗರ ಠಾಣೆಗೆ ಕರೆತಂದಿದ್ದ ಇಲ್ಲಿನ ಪೊಲೀಸರು ಬಳಿಕ ಯಲಹಂಕದ ಕೋಗಿಲೆ ಕ್ರಾಸ್ ಬಳಿ ಇರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದರು. ಎಸಿಪಿ ಪ್ರಕಾಶ್ ನೇತೃತ್ವದ ತಂಡ ಶಾಸಕರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿತ್ತು. ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದ ಕಲಬುರಗಿಯ ಮೂವರು ಯುವಕರು ವಾಪಸ್
Advertisement
Advertisement
ಈ ವೇಳೆ ಪೊಲೀಸರು ಒಂದು ವಾರ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದ್ರೆ ವಿಚಾರಣೆ ನಡೆಸಿದ ಬಳಿಕ, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದರು. ಇದನ್ನೂ ಓದಿ: ಭಾರೀ ಮಳೆ; ತಾಜ್‌ಮಹಲ್‌ನ ಮುಖ್ಯ ಗುಂಬಜ್‌ನಲ್ಲಿ ಸೋರಿಕೆ – ವೀಡಿಯೋ ವೈರಲ್
Advertisement
ಶಾಸರನ್ನು ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದ್ದ ವೇಳೆ ಬೆಂಬಲಿಗರೂ ಅಲ್ಲಿ ಜಮಾಯಿಸಿದ್ದರು. ಬಂಧನ ಖಂಡಿಸಿ ಸ್ಥಳದಲ್ಲೇ ಧಿಕ್ಕಾರ ಕೂಗಿದರು. ಇದನ್ನೂ ಓದಿ: ನಿಗಿ ನಿಗಿ ಕೆಂಡವಾಗಿದ್ದ ನಾಗಮಂಗಲ ಶಾಂತ – ಸಚಿವ ಚಲುವರಾಯಸ್ವಾಮಿ ಶಾಂತಿಸಭೆ ಸಕ್ಸಸ್