Mandya| ನಡುರಸ್ತೆಯಲ್ಲೇ ಎಎಸ್‌ಐ ಮೇಲೆ ಹಲ್ಲೆ – ಆರೋಪಿ ಅರೆಸ್ಟ್

Public TV
1 Min Read
MANDYA ASI ATTACK

ಮಂಡ್ಯ: ವಿಚಾರಣೆಗೆ ಕರೆದ ಎಎಸ್‌ಐ (ASI) ಮೇಲೆ ನಡುರಸ್ತೆಯಲ್ಲೇ ಹಲ್ಲೆಗೆ ಯತ್ನಿಸಿ ರಂಪಾಟ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲದಲ್ಲಿ (Nagamangala) ನಡೆದಿದೆ.

ನಾಗಮಂಗಲ ಗ್ರಾಮಾಂತರ ಎಎಸ್‌ಐ ರಾಜು ಮೇಲೆ ಮಜ್ಜನಕೊಪ್ಪಲು ಪೂಜಾರಿ ಕೃಷ್ಣ ಹಲ್ಲೆಗೆ ಯತ್ನಿಸಿ ದರ್ಪ ತೋರಿದ್ದಾನೆ. ಆರೋಪಿ ಕೃಷ್ಣನ ವಿರುದ್ಧ ಆತನ ತಾಯಿ ಠಾಣೆಗೆ ದೂರು ನೀಡಿದ್ದರು. ಹಣಕ್ಕೆ ಬೇಡಿಕೆ ಇಟ್ಟು ನಿತ್ಯ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ಸಲ್ಲಿಸಲಾಗಿತ್ತು. ದೂರಿನ ಹಿನ್ನೆಲೆ ಕೃಷ್ಣನನ್ನು ಠಾಣೆಗೆ ಕರೆತರಲು ಎಎಸ್‌ಐ ರಾಜು ತೆರಳಿದ್ದರು. ನಾಗಮಂಗಲದ ಕೋರ್ಟ್ ಬಳಿ ನಿಂತಿದ್ದ ಕೃಷ್ಣನನ್ನು ಎಎಸ್‌ಐ ರಾಜು ಠಾಣೆಗೆ ಕರೆದಿದ್ದರು. ಇದನ್ನೂ ಓದಿ: ಆನೇಕಲ್‌| ತಾಯಿ ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ

ಠಾಣೆಗೆ ಬರಲು ಒಪ್ಪದಿದ್ದಾಗ ಕೃಷ್ಣನ ಕಾಲರ್ ಹಿಡಿದು ಬಲವಂತವಾಗಿ ಆಟೋಗೆ ಹತ್ತಿಸಲು ಎಎಸ್‌ಐ ಯತ್ನಿಸಿದ್ದಾರೆ. ಈ ವೇಳೆ ಎಎಸ್‌ಐ ರಾಜುವನ್ನು ಕೃಷ್ಣ ತಳ್ಳಿದ್ದಾನೆ. ತಳ್ಳಾಡಿದಾಗ ರಾಜು ಕೆಳಗೆ ಬಿದ್ದಿದ್ದಾರೆ. ಬಳಿಕ ಕೃಷ್ಣನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಎಲ್ಲಾ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇದನ್ನೂ ಓದಿ: ಕೋಲಾರ | ಮದುವೆ ಮಾಡ್ಕೊಡಿ ಎಂದಿದ್ದಕ್ಕೆ ವಿವಾಹಿತನನ್ನು ಅಟ್ಟಾಡಿಸಿ ಕೊಂದ ಪ್ರೇಯಸಿ ಮನೆಯವ್ರು!

Share This Article