ತುಮಕೂರು: ಬಜರಂಗದಳದ ಜಿಲ್ಲಾ ಸಂಚಾಲಕ ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಿರೋದನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳು ನಾಳೆ ತುಮಕೂರು ಬಂದ್ ಗೆ ಕರೆ ನೀಡಿದೆ.
ತುಮಕೂರು ತಾಲೂಕು ಸಂಪೂರ್ಣ ಬಂದ್ ಆಗಲಿದ್ದು ವಿವಿಧ ಸಮುದಾಯದ ಮುಖಂಡರು, ವರ್ತಕರು ಬಂದ್ ಗೆ ಬೆಂಬಲ ನೀಡಿದ್ದಾರೆ ಎಂದು ವಿಶ್ವಹಿಂದುಪರಿಷತ್ ಮುಖಂಡ ಜಿ.ಕೆ.ಶ್ರೀನಿವಾಸ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿಗೆ ದ್ರೋಹ ಮಾಡಿರುವ ಸುಧಾಕರ್ ಅಧಿಕಾರದ ಮದದಿಂದ ವರ್ತಿಸ್ತಿದ್ದಾರೆ: ಸಿದ್ದರಾಮಯ್ಯ
Advertisement
Advertisement
ಇದೇ ವೇಳೆ ಮಾತನಾಡಿದ ನಗರ ಶಾಸಕ ಜ್ಯೋತಿಗಣೇಶ್, ವಿಶ್ವದಲ್ಲಿ ಹಿಂದೂಗಳಿಗೆ ಮುಕ್ತವಾಗಿರುವ ದೇಶ ಅಂದರೆ ಅದು ಭಾರತ ಮಾತ್ರ. ಇಲ್ಲೂ ಈ ರೀತಿ ದೌರ್ಜನ್ಯಗಳು ನಡೆದರೆ ಹಿಂದೂಗಳನ್ನು ಅರಬ್ಬೀ ಸಮುದ್ರಕ್ಕೆ ಎಸೆಯಬೇಕಾಗುತ್ತದೆ. ಹಾಗಾಗಿ ಹಿಂದೂ ಸಮಾಜ ಒಗ್ಗಟ್ಟಾಗಿ ನಮ್ಮ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಂದ್ವ ನೀತಿ: ಹೆಚ್‍ಡಿಕೆ ತರಾಟೆ
Advertisement
Advertisement
ಏನಿದು ಪ್ರಕರಣ?:
ಬಜರಂಗದಳ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ತುಮಕೂರು ನಗರದ ಗುಬ್ಬಿ ಗೇಟ್ ವೃತ್ತದಲ್ಲಿ ನಡೆದಿದೆ. ಬಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಹಾಗೂ ಅವರ ಜೊತೆಯಲ್ಲಿದ್ದ ಕಿರಣ್ ಎಂಬವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಚಿಕಿತ್ಸೆಗಾಗಿ ತುಮಕೂರು ಜಿಲ್ಲೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರು ಕಾರಿನಲ್ಲಿ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು, ಮನಸ್ಸೋ ಇಚ್ಛೆ ರಾಡ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.