ಬೆಂಗಳೂರು: ಬೆಳಗಾವಿಯಲ್ಲಿ (Belagavi) ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣದ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy), ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಮಾಹಿತಿ ನೀಡಿದ್ದಾರೆ.
ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಚಿವ ರಾಮಲಿಂಗಾ ರೆಡ್ಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿಯನ್ನು ಒಪ್ಪಿಸಿದರು.
Advertisement
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಪೊಲೀಸ್ ಮಹಾನಿರ್ದೇಶಕ ಆಲೋಕ್ ಮೋಹನ್ ಭೇಟಿಯಾಗಿ, ಬೆಳಗಾವಿ ಗಲಾಟೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.
Advertisement
ಘಟನೆ ಬಗ್ಗೆ ಮಾಹಿತಿ ಪಡೆದ ಸಿಎಂ, ಗಡಿಭಾಗದಲ್ಲಿ ಕಟ್ಟುನಿಟ್ಟಾಗಿ ಬಂದೋಬಸ್ತ್ ಮಾಡುವಂತೆ ಸೂಚಿಸಿದರು. ಇನ್ನು ಬಸ್‌ಗಳ ಓಡಾಟ ಹಾಗೂ ರಕ್ಷಣೆ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಕಾರ್ಯದರ್ಶಿ ಜೊತೆ ಮಾತನಾಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಹೇಳಿದರು. ಅಲ್ಲದೇ ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರ ಜೊತೆ ಮಾತನಾಡುವಂತೆ ಡಿಜಿಪಿ ಆಲೋಕ್ ಮೋಹನ್ ಅವರಿಗೆ ಸೂಚನೆ ನೀಡಿದರು.