ಕೊಪ್ಪಳ: ವಿದೇಶಿ ಮತ್ತು ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಗಂಗಾವತಿ (Gangavathi) ತಾಲೂಕಿನ ಸಾಣಾಪುರ ಕೆರೆ (Sanapura Lake) ಬಳಿಯ ಎಡದಂಡೆ ಕಾಲುವೆಯಲ್ಲಿ ನಡೆದಿದೆ.
ಇಸ್ರೇಲ್, ಜರ್ಮನಿ ದೇಶದ ಇಬ್ಬರು, ಮಹಾರಾಷ್ಟ್ರ, ಓರಿಸ್ಸಾದ ಇಬ್ಬರು ಹಾಗೂ ಓರ್ವ ಸ್ಥಳೀಯ ಮಹಿಳೆಯ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಇಲ್ಲ – ಆಹಾರ ಸಚಿವ ಮುನಿಯಪ್ಪ ಹೇಳಿದ್ದೇನು?
Advertisement
ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಗಿಟಾರ್ ಬಾರಿಸುತ್ತಾ ಎಡದಂಡೆ ಕಾಲುವೆ ಮೇಲೆ ಪ್ರವಾಸಿಗರು ಕೂತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಲು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾದವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ರಾಜ್ಯ ಬಜೆಟ್ ಮಂಡನೆ – ಬಜೆಟ್‌ಗೂ ಮುನ್ನ ಬಿಜೆಪಿ, ಜೆಡಿಎಸ್ ಪ್ರತಿಭಟನೆ
Advertisement
ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.