ಶ್ರೀನಗರ: ಕಾಶ್ಮೀರದ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ (IAF) ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಗಿಳಿದ ಸೇನೆ (Indian Army) ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ (Poonch) ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಸೇನೆಯು ಹೆಲಿಕಾಪ್ಟರ್ ಬಳಸಿ ದಾಳಿ ನಡೆದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೈಮಾನಿಕ ಕಣ್ಗಾವಲು ಕೂಡ ನಡೆಸಿದೆ. ಸ್ಥಳಕ್ಕೆ ಸೇನೆಯ ಅಧಿಕಾರಿಗಳು, ಗುಪ್ತಚರ ಸಂಸ್ಥೆ ಅಧಿಕಾರಿಗಳು ಹಾಗೂ ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದ ಪೂಂಚ್‌ನಲ್ಲಿ ವಾಯು ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರ ದಾಳಿ – ಓರ್ವ ಯೋಧ ಹುತಾತ್ಮ
ಶಹಸಿತಾರ್ ಬಳಿ ಶನಿವಾರ ಸಂಜೆ ನಡೆದ ದಾಳಿಯಲ್ಲಿ ಐವರು ಐಎಎಫ್ ಸಿಬ್ಬಂದಿ ಗಾಯಗೊಂಡು, ಒಬ್ಬರು ಮೃತಪಟ್ಟಿದ್ದರು. ದಾಳಿ ನಡೆದ ಬಳಿಕ ಉಗ್ರರು ಸಮೀಪದ ಅರಣ್ಯಕ್ಕೆ ಪರಾರಿಯಾಗಿದ್ದರು. ದಾಳಿಗೆ ಉಗ್ರರು ಎಕೆ ಅಸಾಲ್ಟ್ ರೈಫಲ್, ಅಮೆರಿಕ ನಿರ್ಮಿತ ಎಂ4 ಕಾರ್ಬೈನ್ ಮತ್ತು ಸ್ಟೀಲ್ ಬುಲೆಟ್‍ಗಳನ್ನು ಬಳಸಿದ್ದಾರೆ. ಉಗ್ರರಿಗಾಗಿ ಸೇನೆ ಶೋಧ ಕಾರ್ಯ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2003 ಮತ್ತು 2021ರ ನಡುವೆ ಈ ಭಾಗದಲ್ಲಿ ಯಾವುದೇ ಭಯೋತ್ಪಾದನಾ ದಾಳಿಗಳಿಲ್ಲದೆ ಶಾಂತಿ ನೆಲೆಸಿತ್ತು. ಕಳೆದ ವರ್ಷ ಇದೇ ಭಾಗದಲ್ಲಿ ಪ್ರಮುಖ ಭಯೋತ್ಪಾದಕ ದಾಳಿ ನಡೆದಿತ್ತು. ಇದನ್ನೂ ಓದಿ: ಸಿಖ್ ಪವಿತ್ರ ಗ್ರಂಥದ ಕೆಲ ಪುಟ ಹರಿದು ಹಾಕಿದ್ದಕ್ಕೆ ಯುವಕನ ಕೊಲೆ