ಕೋಲಾರ: ದೇವಾಲಯದ ಬಳಿ ಮೈಕ್ ಸೆಟ್ ಜೋರು ಶಬ್ದವನ್ನು ಪ್ರಶ್ನೆ ಮಾಡಿದ ಹಿರಿಯ ಸಾಹಿತಿ, ಬರಹಗಾರ, ಪತ್ರಕರ್ತ ಕೋಟಿಗಾನಹಳ್ಳಿ ರಾಮಯ್ಯ (Kotiganahalli Ramaiah) ಮೇಲೆ ಹಲ್ಲೆ ಮಾಡಲಾಗಿದೆ.
ಕೋಲಾರ ತಾಲೂಕು ಪಾಪರಾಜನಹಳ್ಳಿ ಗ್ರಾಮದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಮುನೇಶ್ವರ ಸ್ವಾಮಿ ದೇವಾಲಯದ ಬಳಿ ಮೈಕ್ ಶಬ್ದ ಜೋರಾಗಿ ಹಾಕಲಾಗಿತ್ತು. ಇದನ್ನು ಕಡಿಮೆ ಮಾಡುವಂತೆ ಕೇಳಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಗ್ರಾಮ ಪಂಚಾಯತ್ ಸದಸ್ಯ ಮಂಜುನಾಥ್ ಸೇರಿದಂತೆ ಹಲವರು ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಅವರ ಜೊತೆಗಿದ್ದ ಮಗನ ಮೇಲೂ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರು: ಸಚಿವ ಚಲುವರಾಯಸ್ವಾಮಿ
ಹಲ್ಲೆಗೊಳಗಾದ ಕೋಟಿಗಾನಹಳ್ಳಿ ರಾಮಯ್ಯ ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಕಣ್ಣಿಗೆ ಗಾಯವಾಗಿದ್ದು, ವೈದ್ಯರು ಆಸ್ಪತ್ರೆಗೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಆಸ್ಪತ್ರೆಗೆ ಎಸ್ಪಿ ನಾರಾಯಣ ಅವರು ಭೇಟಿ ನೀಡಿ ಆರೋಗ್ಯ ವಿಚಾರಣೆ ಮಾಡಿದರಲ್ಲದೆ, ಆರೋಪಿಗಳ ವಿರುದ್ಧ ಕೂಡಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.