ಮಸಾಜ್‌ ಪಾರ್ಲರ್‌ ಮೇಲೆ ದಾಳಿ – ರಾಮ್ ಸೇನಾ ಸಂಸ್ಥಾಪಕ ಪೊಲೀಸ್‌ ವಶಕ್ಕೆ

Public TV
1 Min Read
PRASAD ATTAVAR

ಮಂಗಳೂರು: ಮಸಾಜ್ ಪಾರ್ಲರ್ (Massage Parlor) ಮೇಲೆ ದಾಳಿ ನಡೆಸಿದ್ದ ರಾಮ್ ಸೇನಾ (Ram Sena) ಸಂಸ್ಥಾಪಕ ಪ್ರಸಾದ್ ಅತ್ತಾವರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು (Mangaluru) ಹೊರವಲಯದ ಕುಡುಪು ಮನೆಯಲ್ಲಿದ್ದ ಅವರನ್ನು, ಅಲ್ಲಿಂದಲೇ ಪೊಲೀಸರು ಅವರನ್ನು ಎಳೆದೊಯ್ದಿದ್ದಾರೆ. ಇದಕ್ಕೂ ಮುನ್ನ ಮಸಾಜ್ ಪಾರ್ಲರ್‌ಗೆ ಕಾನೂನು ಸುವ್ಯವಸ್ಥೆ ಡಿಸಿಪಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆಯ ಹತ್ತು ಜನ ಕಾರ್ಯಕರ್ತರು ಬಿಜೈ ಕೆಎಸ್‍ಆರ್‌ಟಿಸಿ ಬಳಿಯ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿದ್ದರು. ಸೆಲೂನ್‍ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದರು.

ದಾಳಿ ವೇಳೆ, ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್‍ನಲ್ಲಿ ಇದ್ದರು. ಈ ವೇಳೆ ವ್ಯಕ್ತಿಯ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದರು.

ಇದೇ ಮಸಾಜ್ ಪಾರ್ಲರ್‌ಗೆ ಈ ಹಿಂದೆ ಅಂದಿನ ಮೇಯರ್ ಕವಿತಾ ಸನಿಲ್ ಸಹ ದಾಳಿ ನಡೆಸಿದ್ದರು. ಈ ವೇಳೆ ಅನೈತಿಕ ಚಟುವಟಿಕೆ ಬಯಲಿಗೆ ಬಂದಿತ್ತು.

Share This Article