ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯ (Bhadravathi) ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಸಾಕು ಪ್ರಾಣಿಗಳ ಆಹಾರ ತಯಾರಿಕಾ ಕಾರ್ಖಾನೆ ಮೇಲೆ ತುಂಗಾನಗರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.
ಕಾರ್ಖಾನೆಯಲ್ಲಿ ಸಾಕು ಪ್ರಾಣಿಗಳ ಆಹಾರ ತಯಾರಿಕೆಗೆ ಹಸುಗಳ ಮಾಂಸ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕಮಲೇಶ್ ಎಂಬವರಿಗೆ ಮಲ್ನಾಡ್ ಪ್ರೋ ರಿಚ್ ((Malnad Pro Rich) ಎಂಬ ಕಾರ್ಖಾನೆ ಮೇಲೆ ದಾಳಿ ನಡೆಸಿದ್ದಾರೆ.
ಈ ಕಾರ್ಖಾನೆಯಲ್ಲಿ ಪಾಲಿಕೆ ವ್ಯಾಪ್ತಿಯಿಂದ ಬರುವ ಕೋಳಿಯ ತ್ಯಾಜ್ಯ ಸಂಗ್ರಹಿಸಿ ಸಾಕು ಪ್ರಾಣಿಗಳಿಗೆ ಆಹಾರದ ಪ್ಯಾಕೇಟ್ ಗಳನ್ನು ಸಿದ್ಧಪಡಿಸಲಾಗುತ್ತದೆ. ಆದರೆ ಗುರುವಾರ ದಾಳಿ ವೇಳೆ ಕಾರ್ಖಾನೆಯಲ್ಲಿ ಕರುವಿನ ತಲೆಯು ಪತ್ತೆಯಾಗಿದೆ. ಹೀಗಾಗಿ ಈ ಸಾಕು ಪ್ರಾಣಿಗಳ ಆಹಾರ ತಯಾರಿಕಾ ಕಾರ್ಖಾನೆಯಲ್ಲಿ ಹಸುಗಳ ಮಾಂಸವನ್ನು ಬಳಸಲಾಗುತ್ತಿದೆ ಎಂಬ ಅನುಮಾನ ಪೊಲೀಸರದ್ದಾಗಿದೆ. ಇದನ್ನೂ ಓದಿ: 60 ಉಗ್ರರ ಕೊಂದು 250 ಒತ್ತೆಯಾಳುಗಳನ್ನು ಸುರಕ್ಷಿತವಾಗಿ ರಕ್ಷಿಸಿದ ಇಸ್ರೇಲ್ ಸೈನಿಕರು
ಹೀಗಾಗಿ ದಾಳಿ ನಡೆಸಿರುವ ಪೊಲೀಸರು ಒಂದು ಕಾರಿ 12 ಫೀಡಿಂಗ್ ಪುಡ್ ಚೀಲಗಳನ್ನು ವಶಪಡಿಸಿಕೊಂಡು, ಆರೋಪಿ ಕಮಲೇಶ್ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.
Web Stories